ಚಾಮರಾಜನಗರ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸ್ಥಗಿತಗೊಳಿರುವ ಸಫಾರಿಯನ್ನು ಮತ್ತೆ ಪುನರಾರಂಭಮಾಡಬೇಕು ಎಂದು ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಸ್ಥಗಿತಗೊಳಿಸಿರುವುದು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹಾಗೂ ಸ್ಥಳೀಯ ಹೋಟೆಲ್, ರೆಸಾರ್ಟ್, ಪ್ರವಾಸಿ ಮಾರ್ಗದರ್ಶಕರು ಸೇರಿದಂತೆ ಇನ್ನೂ ಹಲವರ ಜೀವನೋಪಾಯಕ್ಕೆ ಬಹು ದೊಡ್ಡಮಟ್ಟದಲ್ಲಿ ಹಿನ್ನೆಡೆಯಾಗಿದೆ. ಆದ್ದರಿಂದ ವೈಜ್ಞಾನಿಕ ಹಾಗೂ ಪರಿಣಾಮಕಾರಿ ಸುರಕ್ಷಿತ ಕ್ರಮಗಳನ್ನು ಕೈಗೊಂಡು, ವನ್ಯಜೀವಿಗಳ ಸಂರಕ್ಷಣೆಗೆ ಯಾವುದೇ ಹಾನಿ ಆಗದಂತೆ ನಿಯಮಿತ ಮಾರ್ಗಸೂಚಿಗಳಡಿ ಸಫಾರಿಯನ್ನು ಶೀಘ್ರದಲ್ಲೇ ಪುನರಾರಂಭಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೊಟೇಲ್ ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ನಂದ್ಯಪ್ಪ ಶೆಟ್ಟಿ, ಉಪಾಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ಪ್ರತಾಪ್, ಜಂಟಿ ಕಾರ್ಯದರ್ಶಿ ಅಂಕಶೆಟ್ಟಿ, ಗುರುರಾಜ್, ವಿಜಯ್ ಕುಲಾಲ್, ಪ್ರಸನ್ನ ಸೇರಿದಂತೆ ಇನ್ನಿತರರಿದ್ದರು.



