Thursday, April 3, 2025
Google search engine

Homeರಾಜ್ಯಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ: ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಶಾಸಕ ಯತ್ನಾಳ್ ಪತ್ರ

ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ: ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಶಾಸಕ ಯತ್ನಾಳ್ ಪತ್ರ

ವಿಜಯಪುರ: ಮುಸ್ಲೀಮರಿಗೆ ಗುತ್ತಿಗೆಯಲ್ಲಿ 4% ಮೀಸಲಾತಿ ಸಂಬಂಧ ಸದನದಲ್ಲಿ ವಿಧೇಯಕ ಮಂಡನೆ ಮಾಡಿದ ಬೆನ್ನಲ್ಲೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆದು ವಿವಾದಾತ್ಮಕ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ.

ರಾಜ್ಯಪಾಲರಾದ ಥಾವರ್‌ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ(ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ವಿನಂತಿಸಿದ್ದಾರೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಂಡಿಸಿದ್ದರು. ಸದನದಲ್ಲಿ ವಿಧೇಯಕ ಮಂಡನೆಯಾಗುತ್ತಲೇ ಶಾಸಕ ಯತ್ನಾಳ್ ಪತ್ರ ಬರೆದಿದ್ದಾರೆ.

RELATED ARTICLES
- Advertisment -
Google search engine

Most Popular