ಮೈಸೂರು : ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ಹಿರಿಯ ಛಾಯಾಗ್ರಾಹಕ ನಾಣಿ ಹೆಬ್ಬಾಳು ರಾಜೀನಾಮೆ ನೀಡಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಇಡೀ ರಾಜ್ಯದಲ್ಲಿಯೇ ಮಾದರಿ ಸಂಘ. ಆದರೆ ಕೆಲವು ದಿನಗಳಿಂದ ಸಂಘದ ಅಧ್ಯಕ್ಷರ ಮೇಲೆ ಬಂದಿರುವಂತಹ ಗುರುತರವಾದ ಆರೋಪಗಳ ಹಿನ್ನೆಲೆಯಲ್ಲಿ ನೈತಿಕತೆಯನ್ನು ಮುಂದಿಟ್ಟುಕೊಂಡು ಸಂಘದ ಬಗ್ಗೆ ಕೇವಲವಾಗಿ ಮಾತನಾಡುತ್ತಿರುವ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಯಾಗಿ ಮುಂದುವರಿಯಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಈ ಕಾರಣಕ್ಕಾಗಿ ಕಾರ್ಯಕಾರಿ ಸಮಿತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.