Saturday, April 19, 2025
Google search engine

Homeಸ್ಥಳೀಯಅರಮನೆಯ ಪ್ರವೇಶಕ್ಕೆ ಪರಿಷ್ಕೃತ ಶುಲ್ಕ ನಿಗಧಿ

ಅರಮನೆಯ ಪ್ರವೇಶಕ್ಕೆ ಪರಿಷ್ಕೃತ ಶುಲ್ಕ ನಿಗಧಿ

ಮೈಸೂರು : ವಿಶ್ವವಿಖ್ಯಾತ ಮೈಸೂರು ಅರಮನೆಗೆ ದಿನನಿತ್ಯ ದೇಶ-ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಅರಮನೆ ವೀಕ್ಷಣೆಗಾಗಿ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಅರಮನೆಯ ಒಳಾವರಣದಲ್ಲಿ ಬರುವ ಚಪ್ಪಲಿ ಸ್ಟಾಂಡ್, ಲಗ್ಗೇಜ್ ಕೊಠಡಿ ಮತ್ತು ಶೌಚಾಲಯಗಳನ್ನು ಪ್ರವಾಸಿಗರಿಗೆ ಉಚಿತಗೊಳಿಸಿ, ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ.

ಅದರಂತೆ ವಯಸ್ಕರಿಗೆ ರೂ.೧೨೦, ೧೦ ರಿಂದ ೧೮ ವರ್ಷದೊಳಗಿನ ಮಕ್ಕಳಿಗೆ ೭೦ ರೂ.(೧೦ ವರ್ಷದೊಳಗಿನ ಮಕ್ಕಳಿಗೆ ಉಚಿತ), ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರ ೫೦ ರೂ. ಹಾಗೂ ವಿದೇಶಿ ಪ್ರವಾಸಿಗರಿಗೆ ೧೦೦೦ ರೂ. ಅನುಮೋದಿತ ಪರಿಷ್ಕೃತ ಶುಲ್ಕವನ್ನು ನಿಗಧಿ ಮಾಡಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular