Friday, April 25, 2025
Google search engine

Homeಅಪರಾಧರಿಕ್ಕಿ ರೈ ತನ್ನನ್ನು ತಾನೇ ಶೂಟ್ ಮಾಡಿಕೊಂಡ! : ವಿಚಾರಣೆ ವೇಳೆ ಗನ್ ಮ್ಯಾನ್ ನೀಡಿದ...

ರಿಕ್ಕಿ ರೈ ತನ್ನನ್ನು ತಾನೇ ಶೂಟ್ ಮಾಡಿಕೊಂಡ! : ವಿಚಾರಣೆ ವೇಳೆ ಗನ್ ಮ್ಯಾನ್ ನೀಡಿದ ಸ್ಪೋಟಕ ಹೇಳಿಕೆ

ಬೆಂಗಳೂರು : ಭೂಗತ ಲೋಕದ ಮಾಜಿ ಡಾನ್ ದಿ.​ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲಿನ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಗನ್ ಮ್ಯಾನ್​​​ನನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿಸಿದ ಬಳಿಕ ವಿಚಾರಣೆ ನಡೆಸಿದ ಪೊಲೀಸರು ಗನ್ ಮ್ಯಾನ್ ಸ್ಪೋಟಕವಾದ ಹೇಳಿಕೆ ನೀಡಿದ್ದು ರಿಕ್ಕಿ ರೈ ತನ್ನನ್ನು ತಾನೇ ಶೂಟ್ ಮಾಡಿಕೊಂಡಿದ್ದಾನೆ ಎಂದು ಹೇಳಿಕೆ ನೀಡಿದ್ದಾನೆ.

ಹೌದು ಗನ್ ಮ್ಯಾನ್ ವಿಠ್ಠಲ್ ನನ್ನು ರಾಮನಗರ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಬಳಿಕ ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ. ಈ ವೇಳೆ ಪೊಲೀಸರು ಗನ್ ಮ್ಯಾನ್ ನನ್ನು ವಿಚಾರಣೆಗೆ ಒಳಪಡಿಸಿದಾಗ ಅದಕ್ಕೆ ಮಾಡಿಕೊಂಡಿದ್ದಾನೆ ಎಂದು ಹೇಳಿಕೆ ನೀಡಿದ್ದು, ಪೊಲೀಸರು ಆತನಿಂದ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

ಮಾಜಿ ಡಾನ್​ ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ಹಾಗೂ ಉದ್ಯಮಿ ರಿಕ್ಕಿ ರೈ ಅವರ ಮೇಲೆ ಕಳೆದ ಶುಕ್ರವಾರ ರಾತ್ರಿ (ಏಪ್ರಿಲ್ 18) ರಾಮನಗರದ ಬಿಡದಿ ಬಳಿ ಫೈರಿಂಗ್​ ನಡೆದಿತ್ತು. ರಾತ್ರಿ 11:30ರ ಸುಮಾರಿಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ರಿಕ್ಕಿ ಮೂಗು ಹಾಗೂ ಕೈಗಳಿಗೆ ಗಾಯಗಳಾಗಿತ್ತು. ಬಳಿಕ ಅವರನ್ನು ಬೆಂಗಳೂರಿನ ಹೆಚ್ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

RELATED ARTICLES
- Advertisment -
Google search engine

Most Popular