ಮಂಗಳೂರು (ದಕ್ಷಿಣ ಕನ್ನಡ): ಧರ್ಮಸ್ಥಳದ ಪಾಂಗಾಳದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.
ದಿನಾಂಕ 06.08.2025 ರಂದು ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:47/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಧರ್ಮಸ್ಥಳ ನಿವಾಸಿ ಪದ್ಮಪ್ರಸಾದ್ (32), ಧರ್ಮಸ್ಥಳ ನಿವಾಸಿ ಸುಹಾಸ್ (22), ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಧರ್ಮಸ್ಥಳ ನಿವಾಸಿ ಶಶಿಧರ್(30) ಹಾಗೂ ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಎಂಬುವವರನ್ನು ಅರೆಸ್ಟ್ ಮಾಡಲಾಗಿದೆ .
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಾಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿರುತ್ತದೆ.