ಮಂಡ್ಯ : ವಾಹನ ಬಿಡದ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದ ನಗರಸಭೆ ಕಚೇರಿಯ ಮುಂಭಾಗ ಭಾರೀ ಹೈಡ್ರಾಮಾ ನಡೆಯುತ್ತಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಎದುರಲ್ಲೇ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ವಾಗ್ವಾದ ನಡೆಸಿರುವ ಘಟನೆ ನಡೆದಿದೆ.
ಇಂದು ಬುಧವಾರ ಮಂಡ್ಯ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆ ಸಂಬಂಧ ಚುನಾವಣೆ ನಡೆಯುತ್ತಿದ್ದು, ಈ ವೇಳೆ ಕಾಂಗ್ರೆಸ್ ಸದಸ್ಯರಿರುವ ವಾಹನವನ್ನು ಪೊಲೀಸರು ಬಿಟ್ಟಿಲ್ಲ. ಆದರೆ ಜೆಡಿಎಸ್ ಸದಸ್ಯರ ವಾಹನವನ್ನು ಮಾತ್ರ ನಗರಸಭೆ ಆವರಣದೊಳಗೆ ಬಿಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಥಳದಲ್ಲಿ ಇದ್ದರೂ ಅವರೇ ಎದುರೇ ಕಾಂಗ್ರೆಸ್ -ಜೆಡಿಎಸ್ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ.