ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಲ್ಲಿ ಇತ್ತೀಚಿಗೆ ನಡೆದಿದ್ದ ಪ್ರತಿಭಟನೆಯೊಂದರಲ್ಲಿ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಎಂಎಲ್ ಸಿ ಐವನ್ ಡಿಸೋಜಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅವ್ರ ವಿರುದ್ದ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಬಿಜೆಪಿ ಸುಳ್ಯ ಮಂಡಲ ಯುವಮೊರ್ಚಾದ ವತಿಯಿಂದ ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ, ಸುಳ್ಯ ಮಂಡಲ ಅಧ್ಯಕ್ಷರ ಸಹಿತ ಹಲವು ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು.