ಮೈಸೂರು: ನೈಋತ್ಯ ರೈಲ್ವೆ, ಮೈಸೂರು ವಿಭಾಗವು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದ ಪ್ರತಿನಿಧಿಗಳನ್ನು ರೋಜ್ಗಾರ್ ಮೇಳಾ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತಿದೆ. ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ರವರು ಭಾರತ ಒಕ್ಕೂಟದ ವಿವಿಧ ಇಲಾಖೆಗಳಿಗೆ ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನೇಮಕಾತಿ ಪತ್ರಗಳನ್ನು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಕ್ಯಾಂಪಸ್‌ನಲ್ಲಿರುವ ‘ನಾಲೆಡ್ಜ್ ಪಾರ್ಕ್’ ಸಭಾಂಗಣದಲ್ಲಿ ನಡೆಯುವ ರೋಜ್ಗಾರ್ ಮೇಳಾದ 10 ನೇ ಆವೃತ್ತಿ ಕಾರ್ಯಕ್ರಮದ ಸಂದರ್ಭದಲ್ಲಿ ವಿತರಿಸಲಿದ್ದಾರೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಆಯೋಜಿಸಿರುವ ಈ ಕಾರ್ಯಕ್ರಮವು 28 ನೆಯ ಅಕ್ಟೋಬರ್ 2023 ಶನಿವಾರದಂದು 11:30 ಗಂಟೆಯಿಂದ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಭಾರತದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ಎ. ನಾರಾಯಣಸ್ವಾಮಿ ರವರು ಆಗಮಿಸಲಿದ್ದಾರೆ. ರೈಲ್ವೆ ಇಲಾಖೆ, ಶಿಕ್ಷಣ ಇಲಾಖೆ, ಅಂಚೆ ಇಲಾಖೆ, ಹಣಕಾಸು ಸೇವೆಗಳು ಮತ್ತು ಗೃಹ ಸಚಿವಾಲಯದಲ್ಲಿ ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಗುವುದು.
ಸನ್ಮಾನ್ಯ ಪ್ರಧಾನ ಮಂತ್ರಿಗಳು ಮೈಸೂರು ಸೇರಿದಂತೆ ಭಾರತದಾದ್ಯಂತ 37 ಸ್ಥಳಗಳಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿರುವುದರಿಂದ ಈ ಕಾರ್ಯಕ್ರಮವು ಮಹತ್ವದ ಪ್ರಾಮುಖ್ಯತೆಯನ್ನು ಹೊಂದಿದೆ. ಈ ಉಪಕ್ರಮವು ಉದ್ಯೋಗಾವಕಾಶಗಳನ್ನು ನೀಡಿ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವ ಮತ್ತು ನಮ್ಮ ಸಮಾಜದ ಒಟ್ಟಾರೆ ಪ್ರಗತಿಗೆ ಕೊಡುಗೆ ನೀಡುವ ಗುರಿಯನ್ನು ಹೊಂದಿದೆ.