Saturday, April 19, 2025
Google search engine

Homeರಾಜ್ಯಸುದ್ದಿಜಾಲಹಂಗಳ ಗ್ರಾಪಂ ಅಧ್ಯಕ್ಷರಾಗಿ ರೂಪ, ಉಪಾಧ್ಯಕ್ಷರಾಗಿ ನಾಗರಾಜು ಅವಿರೋಧ ಆಯ್ಕೆ

ಹಂಗಳ ಗ್ರಾಪಂ ಅಧ್ಯಕ್ಷರಾಗಿ ರೂಪ, ಉಪಾಧ್ಯಕ್ಷರಾಗಿ ನಾಗರಾಜು ಅವಿರೋಧ ಆಯ್ಕೆ

ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಬೆಂಬಲಿತ ನೂತನ ಅಧ್ಯಕ್ಷರಾಗಿ ರೂಪ ಹಾಗೂ ಉಪಾಧ್ಯಕ್ಷರಾಗಿ ನಾಗರಾಜು ಅವಿರೋಧ ಆಯ್ಕೆಯಾದರು.

ಗ್ರಾಪಂ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರೂಪ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಾಗರಾಜು ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆ ಚುನಾವಣೆ ಅಧಿಕಾರಿಯಾಗಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಮಧುಸೂಧನ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು. ನಂತರ ನೂತನ ಅಧ್ಯಕ್ಷ ಹಾಗು ಉಫಾಧ್ಯಕ್ಷರಿಗೆ ಬೆಂಬಲಿಗರು ಹೂವಿನ ಹಾರ ಹಾಕಿ ಸನ್ಮಾಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆ ರೂಪ ಹಾಗೂ ಉಪಾಧ್ಯಕ್ಷ ನಾಗರಾಜು ಮಾತನಾಡಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳ ಸಹಕಾರ ಪಡೆದು ಗ್ರಾಮ ಪಂಚಾಯಿತಿಗೆ ಸರ್ಕಾರದಿಂದ ಬರುವ ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿ ಗ್ರಾಪಂ ಅಭಿವೃದ್ಧಿಗೆ ಶ್ರಮ ವಹಿಸಲಾಗವುದು ಎಂದು ತಿಳಿಸಿದರು.

ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಗ್ರಾಪಂ ಸದಸ್ಯರಾದ ಮಲ್ಲಪ್ಪ, ಮಹೇಶ್, ವೃಷಬೇಂದ್ರ, ಮಹದೇವಸ್ವಾಮಿ, ಚಿಕ್ಕತಾಯಮ್ಮ, ರಾಜಮ್ಮ, ಗೀತಾ, ಭಾಗ್ಯ, ದೊರೆಸ್ವಾಮಿ, ಸುಮಾ, ಬೆಳ್ಳಮ್ಮ, ಪಿಡಿಓ ಶಾಂತಮಲ್ಲಪ್ಪ, ಕಾಯದರ್ಶಿ ಮಹದೇವಯ್ಯ ಸೇರಿದಂತೆ ಗ್ರಾಪಂ ಸಿಬ್ಬಂದಿ ವರ್ಗದವರು ಹಾಜರಿದ್ದರು.


RELATED ARTICLES
- Advertisment -
Google search engine

Most Popular