Saturday, April 19, 2025
Google search engine

Homeರಾಜ್ಯಸುದ್ದಿಜಾಲವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಸಗೋಡು-ಯಲಕನೂರು-ಕಣಿವೆ ರಸ್ತೆಯ ೨ ಕಿ.ಮೀ. ನಿಂದ ೧೩ ಕಿ.ಮೀ. ರವರೆಗೆ ಡಾಂಬರೀಕರಣ ಮತ್ತು ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಸೆಕ್ಷನ್ ೧೪೪ ಮತ್ತು ಮೋಟಾರು ವಾಹನ ಕಾಯ್ದೆ ೧೯೮೮ರ ಕಲಂ ೧೧೫ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು ೧೯೮೯ರ (ತಿದ್ದುಪಡಿ ನಿಯಮಗಳು ೧೯೯೦) ನಿಯಮ ೨೨೧ಎ(೫)ರಲ್ಲಿ ದತ್ತವಾದ ಅಧಿಕಾರದಂತೆ ಮಸಗೋಡು-ಯಲಕನೂರು-ಕಣಿವೆ ರಸ್ತೆಯ ೨ ಕಿ.ಮೀ. ನಿಂದ ೧೩ ಕಿ.ಮೀ. ರವರೆಗಿನ ರಸ್ತೆಯಲ್ಲಿ ನವೆಂಬರ್, ೩೦ ರವರೆಗೆ ಜಾರಿಯಲ್ಲಿದ್ದ ವಾಹನ ಸಂಚಾರ ನಿರ್ಬಂಧ ಆದೇಶವನ್ನು ಜನವರಿ, ೦೧ ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ಸಾರ್ವಜನಿಕರು ಬದಲಿ ರಸ್ತೆಯಾದ ನೇಗಳ್ಳಿ-ಕರ್ಕಳ್ಳಿ-ಕಾರೇಕೊಪ್ಪ-ಕೂಡಿಗೆ ರಸ್ತೆ ಮಾರ್ಗವನ್ನು ಬಳಸುವುದು. ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ ೧೯೮೮ರ ಸೆಕ್ಷನ್ ೧೧೬ ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು ೧೯೮೯ರ (ತಿದ್ದುಪಡಿ ನಿಯಮಗಳು ೧೯೯೦) ನಿಯಮ ೨೨೧ಎ (೨)ರಂತೆ ಅವಶ್ಯವಿರುವ ಸಂಜ್ಞೆ / ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular