ಮಂಗಳೂರು : ಕುಖ್ಯಾತ ರೌಡಿಶೀಟರ್, ಜೋಡಿಕೊಲೆ ಆರೋಪಿ, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಟೋರಿಯಸ್ ರೌಡಿ ನೌಫಲ್ ಬಜಾಲ್ ನನ್ನು ದುಷ್ಕರ್ಮಿಗಳು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಿದ್ದಾರೆ.
ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ಈತ ಹಲವು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ಶನಿವಾರ ಉಪ್ಪಳ ಗೇಟ್ ಬಳಿಗೆ ಕರೆಸಿದ್ದ ತಂಡ ಅಲ್ಲಿಯೇ ತಲವಾರುಗಳಿಂದ ಕಡಿದು ಹಾಕಿದೆ ಎನ್ನಲಾಗುತ್ತಿದೆ. ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿದ್ದು ಶವವನ್ನು ಪೆರಿಯಾರಂ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಿದ್ದು ಪೋಸ್ಟ್ ಮಾರ್ಟಂ ಬಳಿಕ ಕೊಲೆಯ ಹಿಂದಿನ ಕಾರಣ ತಿಳಿದು ಬರಲಿದೆ ಎನ್ನಲಾಗುತ್ತಿದೆ.



