Friday, April 11, 2025
Google search engine

Homeಅಪರಾಧಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ: ಏಳು ಅಧಿಕಾರಿಗಳು ಅಮಾನತು

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ: ಏಳು ಅಧಿಕಾರಿಗಳು ಅಮಾನತು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್‌ ಆದ ಬೆನ್ನಲ್ಲೇ ಸರ್ಕಾರ 7 ಮಂದಿಯನ್ನು ಅಮಾನತು ಮಾಡಿದೆ. ಜೈಲಿನಲ್ಲಿ ದರ್ಶನ್‌ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು.

ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ಜೈಲಿನ ಏಳು ಅಧಿಕಾರಿಗಳನ್ನು ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌, ಇದು ಹೇಗೆ ಆಯಿತು ಎಂದು ಈ ಪ್ರಕರಣದ ಬಗ್ಗೆ ವರದಿ ಕೇಳಿದ್ದೇನೆ. ಜೈಲಿನಲ್ಲಿ ಈ ರೀತಿ ನಡೆಯಬಾರದು. 7 ಜನ ಭಾಗಿಯಾಗಿದ್ದಾರೆ ಅಂತ ವರದಿ ಬಂದ ಮೇಲೆ ಕ್ರಮ ನಡೆದಿದೆ. ಎಲ್ಲಾ ಜೈಲುಗಳಲ್ಲಿ ಜಾಮರ್, ಕ್ಯಾಮೆರಾ ಹಾಕಿದರೂ ಹೀಗೆ ಆಗುವುದು ಸರಿಯಲ್ಲ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ.

‘ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಪರಮೇಶ್ವರ್ ಅವರು ಭರವಸೆ ನೀಡಿದ್ದಾರೆ. ಊಟದ ವಿಚಾರ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ದರ್ಶನ್​ಗೆ ಚಿಕನ್ ಬಿರಿಯಾನಿ ಕೊಟ್ಟಿಲ್ಲ. ಜೈಲಿನ ನಿಯಮದಂತೆ ನಡೆಯಲಾಗುತ್ತಿದೆ.

ತನಿಖೆ ಬಳಿಕ ಫೋನ್ ಎಲ್ಲಿಂದ ಬಂತು, ಸಿಗರೇಟ್ ಹೇಗೆ ಬಂದಿದೆ ಎನ್ನುವುದರ ಬಗ್ಗೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಈಗ ನಡೆದ ಘಟನೆ ಸಮರ್ಥಿಸಿಕೊಳ್ಳುತ್ತಿಲ್ಲ’ ಎಂದು ಪರಮೇಶ್ವರ್ ಹೇಳಿದ್ದಾರೆ.

ಜೈಲಿನಲ್ಲಿ ಜಾಮರ್ ಹಾಕಿ ಹೈ ಪ್ರೀಕ್ವೆನ್ಸಿ ಇಡಲಾಗಿತ್ತಂತೆ. ಇದರಿಂದ ಪಕ್ಕದ ಏರಿಯಾಗಳಿಗೆ ತೊಂದರೆ ಆಗಿತ್ತು. ಹೀಗಾಗಿ, ಸದ್ಯ ಪ್ರೀಕ್ವೆನ್ಸಿ ಕಡಿಮೆ ಮಾಡಲಾಗಿದೆ. ‘ಫೋಟೋ ಯಾರು ತೆಗೆದರು? ಯಾರ ಮೊಬೈಲ್​ನಲ್ಲಿ ತೆಗದಿದ್ದಾರೆ ಅನ್ನೋದು ಮುಖ್ಯ ಆಗುತ್ತದೆ’ ಎಂದು ಪರಮೇಶ್ವರ್ ಹೇಳಿದ್ದಾರೆ.

ಜೈಲರ್ಸ್‌ಗಳಾದ ಶರಣ ಬಸವ ಅಮೀನ್‌ಗಡ್, ಪ್ರಭು ಎಸ್. ಖಂಡೇಲ್‌ವಾಲ್, ಅಸಿಸ್ಟೆಂಟ್‌ ಜೈಲರ್ಸ್‌ ಎಲ್.ಎಸ್. ತಿಪ್ಪೇಸ್ವಾಮಿ, ಶ್ರೀಕಾಂತ್ ತಲವಾರ್, ಹೆಡ್‌ ವಾರ್ಡರ್ಸ್‌ ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್ ಕಡಪಟ್ಟಿ, ವಾರ್ಡರ್ ಬಸಪ್ಪ ತೇಲಿ ಅವರನ್ನು ಅಮಾನತು ಮಾಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದರು.

RELATED ARTICLES
- Advertisment -
Google search engine

Most Popular