Monday, November 10, 2025
Google search engine

Homeರಾಜ್ಯಜೈಲಿನಲ್ಲಿ ರಾಜಾತಿಥ್ಯ: ಮೂವರು ಅಧಿಕಾರಿಗಳ ತಲೆದಂಡ

ಜೈಲಿನಲ್ಲಿ ರಾಜಾತಿಥ್ಯ: ಮೂವರು ಅಧಿಕಾರಿಗಳ ತಲೆದಂಡ

ಬೆಂಗಳೂರು: ಇಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಜೈಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ  ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಗೃಹ ಸಚಿವ ಪರಮೇಶ್ವರ್‌  ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅಧೀಕ್ಷಕ ಸುರೇಶ್‌, ಜೈಲ್‌ ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್‌ ಭಜಂತ್ರಿ ಅವರನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅವರ ಮುಖ್ಯಸ್ಥರಾಗಿರುವ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಜಿಲ್ಲಾಧಿಕಾರಿಗಳು, ಎಸ್‌ಪಿ ಇರಲಿದ್ದಾರೆ ಎಂದು ತಿಳಿಸಿದರು.

ಕಾನೂನು ವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ ರೆಡ್ಡಿ, ರಿಷ್ಯಂತ್ ಅವರನ್ನು ಒಳಗೊಂಡ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ತನಿಖೆ ಬಳಿಕ ವರದಿ ನೀಡುವಂತೆ ಸೂಚಿಸಲಾಗಿದೆ. 5 ವರ್ಷಗಳ ನಂತರ ಜೈಲು ಅಧಿಕಾರಿಗಳ ವರ್ಗಾವಣೆ ಕಡ್ಡಾಯ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

RELATED ARTICLES
- Advertisment -
Google search engine

Most Popular