ಬೆಂಗಳೂರು : ಬೆಳಗಾವಿ ಮಹಾನಗರ ಪಾಲಿಕೆಗೆ 170 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ವಿಧಾನಪರಿಷತ್ಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಳವಾರ್ ಸಾಬಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೆಳಗಾವಿ ನಗರದ ಬಸವನಕುಡುಚಿಯ ದೇವರಾಜ ಅರಸು ಕೆ.ಎಚ್.ಬಿ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಯುಜಿಡಿ, ವಿದ್ಯುತ್ ಸಂಪರ್ಕ ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು 15 ಕೋಟಿ ರೂ. ಮೊತ್ತದ ಅಂದಾಜು ಪಟ್ಟಿಯನ್ನು ಪಾಲಿಕೆಯಿಂದ ಸಿದ್ಧಪಡಿಸಿದ್ದು, ಇದು ಪ್ರತ್ಯೇಕ ಅನುದಾನ ವಾಗಿದೆ ಎಂದು ಸ್ಪಷ್ಟಪಡಿಸಿದರು.
ಬಳಿಕ ಶಾಸಕ ಜಗದೇವ್ ಗುತ್ತೇದಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಾದೇಶಿಕ ಪದ್ಧತಿಗೆ ಅನುಗುಣವಾಗಿ ಹೊಸ ಮೆನುವಿನೊಂದಿಗೆ ಇಂದಿರಾ ಕ್ಯಾಂಟೀನ್ಗಳಿಂದ ಆಹಾರ ನೀಡಲು ಆದೇಶಿಸಲಾಗಿದೆ. ಇಂದಿರಾ ಕ್ಯಾಂಟೀನ್ಗಳನ್ನು ಗುತ್ತಿಗೆ ಆಧಾರದಲ್ಲಿ ನಿರ್ವಹಣೆ ಮಾಡಲಾಗುತ್ತಿದ್ದು, ಸರ್ಕಾರ ನಿಗದಿಪಡಿಸಿರುವ ಮೆನು ಹಾಗೂ ದರಗಳ ಅನುಸಾರ ಆಹಾರ ವಿತರಣೆ ನಡೆಯುಂತೆ ಕಲಬುರಗಿ ಮಹಾನಗರ ಪಾಲಿಕೆಯ ಮೂಲಕ ನಿಯಮಿತವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಇಂದಿರಾ ಕ್ಯಾಂಟೀನ್ಗಳಿಗೆ ಗುತ್ತಿಗೆದಾರರೇ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದರು.



