ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷವು ಇದೀಗ ದೆಹಲಿಯಲ್ಲೂ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್, ಪ್ಯಾರಿ ದೀದಿ ಯೋಜನೆಗೆ ಚಾಲನೆ ನೀಡಲು ಬಂದಿದ್ದೇನೆ, ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತದೆ ಮತ್ತು ಮಹಿಳೆಯರಿಗೆ 2,500 ರೂಪಾಯಿ ನೀಡುತ್ತೇವೆ ಎಂಬ ವಿಶ್ವಾಸವಿದೆ ಮತ್ತು ಅದನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ನಾವು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಮೊದಲ ಸಚಿವ ಸಂಪುಟ ಸಭೆಯಲ್ಲಿ ಜಾರಿಗೆ ತಂದಿದ್ದೇವೆ. ಅದೇ ಮಾದರಿಯಲ್ಲಿ ದೆಹಲಿಯಲ್ಲೂ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.