Monday, April 21, 2025
Google search engine

Homeರಾಜ್ಯಬ್ರಾಹ್ಮಣ-ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ೫.೫೩ ಕೋಟಿ ರೂ ವಿದ್ಯಾರ್ಥಿ ವೇತನ ಬಿಡುಗಡೆ

ಬ್ರಾಹ್ಮಣ-ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ೫.೫೩ ಕೋಟಿ ರೂ ವಿದ್ಯಾರ್ಥಿ ವೇತನ ಬಿಡುಗಡೆ

ಬೆಂಗಳೂರು : ಬ್ರಾಹ್ಮಣ ಹಾಗೂ ಆರ್ಯ ವೈಶ್ಯ ಸಮಾಜದ ೪೦೬೭ ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ೫.೫೩ ಕೋಟಿ ರೂ ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆಗೊಳಿಸಿದರು. ಹಣ ವರ್ಗಾವಣೆ ನಂತರ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಚಿವರು, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಬ್ರಾಹ್ಮಣ ಮತ್ತು ಆರ್ಯ ವೈಶ್ಯ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.

ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್ ಅಧ್ಯಯನ ನಡೆಸುತ್ತಿರುವ ಎರಡೂ ಸಮಾಜದ ೪ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಈಗಾಗಲೇ ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಸಮಾಜಕ್ಕೆ ಬೆಳಕಾಗಬೇಕು ಎಂದು ಅವರು ಹಾರೈಸಿದರು.

RELATED ARTICLES
- Advertisment -
Google search engine

Most Popular