Saturday, April 19, 2025
Google search engine

Homeರಾಜ್ಯನಟ ಪುನೀತ್ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವು ತಡೆಯಲು 6 ಕೋಟಿ ರೂ ಅನುದಾನ

ನಟ ಪುನೀತ್ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವು ತಡೆಯಲು 6 ಕೋಟಿ ರೂ ಅನುದಾನ

ಬೆಂಗಳೂರು: ದಿ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವು ತಡೆಯಲು ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಆಟೋಮೇಟೆಡ್ ಎಕ್ಸ್ ಟರ್ನಲ್ ಡೆಫಿಬ್ರಿಲ್ಲೇಟರ್ಸ್ ಅಳವಡಿಕೆಗೆ 6 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ​ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಲಯಕ್ಕೆ ವಿವಿಧ ಯೋಜನೆಗಳು, ಅನುದಾನಗಳನ್ನು ಘೋಷಣೆ ಮಾಡಿದ್ದಾರೆ.

ರಾಜ್ಯಾದ್ಯಂತ ಹೊಸದಾಗಿ 46 ಡಯಾಲಿಸಿಸ್​ ಕೇಂದ್ರಗಳನ್ನು ಆರಂಭಿಸಲು 92 ಕೋಟಿ ರೂ ಅನುದಾನ ನೀಡಲಾಗಿದೆ. 23 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು 70 ಕೋಟಿ ಅನುದಾನ ನೀಡಲಾಗಿದೆ. ನವಜಾತ ಶಿಶು, ಮಕ್ಕಳು, ಮಹಿಳೆಯರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ನಿವಾರಿಸಲು ಸಮಗ್ರ ಪರೀಕ್ಷೆ, ಚಿಕಿತ್ಸೆ ಅರಿವು ಮೂಡಿಸಲು 25 ಕೋಟಿ ಅನುದಾನ ನೀಡಲಾಗಿದೆ.

ಆಶಾಕಿರಣ ಕಾರ್ಯಕ್ರಮದಡಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ, ಮಂಡ್ಯ ಜಿಲ್ಲೆಯಲ್ಲಿ 21 ಕೋಟಿ ವೆಚ್ಚದಲ್ಲಿ ನೇತ್ರ ತಪಾಸಣೆ,ಚಿಕಿತ್ಸಾ ಅಭಿಯಾನ ನಡೆಸಲಾಗುವುದು. ಮಧುಮೇಹ, ರಕ್ತದೊತ್ತಡ ರೋಗಿಗಳ ಪತ್ತೆ ಹಚ್ಚಿ ಔಷಧಿ ಮನೆ ಬಾಗಿಲಿಗೆ ತಲುಪಿಸುವ ಪ್ರಾಯೋಗಿಕ ಯೋಜನೆ ಎಂಟು ಜಿಲ್ಲೆಗಳಲ್ಲಿ ಜಾರಿ ಮಾಡಲಾಗುವುದು.

8 ಕೋಟಿ ರೂ ವೆಚ್ಚದಲ್ಲಿ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯ ಸ್ಥಾಪನೆ ಮತ್ತು ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣಕ್ಕಾಗಿ ಕರ್ನಾಟಕ ಡಿಜಿಟಲ್ ಹೆಲ್ತ್ ಸೊಸೈಟಿ ಸ್ಥಾಪಿಸಲಾಗುವುದು ಎಂದು ಹೇಳಿದರು.

RELATED ARTICLES
- Advertisment -
Google search engine

Most Popular