Friday, April 11, 2025
Google search engine

Homeಅಪರಾಧಪಾಂಡವಪುರ ಪೊಲೀಸ್ ಠಾಣೆಗೆ RSS ಕಾರ್ಯಕರ್ತರ ಮುತ್ತಿಗೆ: ಡಿವೈಎಸ್ಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ

ಪಾಂಡವಪುರ ಪೊಲೀಸ್ ಠಾಣೆಗೆ RSS ಕಾರ್ಯಕರ್ತರ ಮುತ್ತಿಗೆ: ಡಿವೈಎಸ್ಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರ ಆರ್‌ಎಸ್‌ಎಸ್ ಕಚೇರಿಗೆ ಪೊಲೀಸರು ದಾಳಿ ಮಾಡಿದ್ದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪೊಲೀಸರು ಆರ್‌ಎಸ್‌ಎಸ್ ಕಚೇರಿಗೆ ದಾಳಿ ಮಾಡಿದ್ದಷ್ಟೇ ಅಲ್ಲದೆ, ಶೂ ಹಾಕಿಕೊಂಡೇ ಕಚೇರಿ ಒಳ ಪ್ರವೇಶಿಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು, ಡಿವೈಎಸ್ಪಿ ಹಾಗೂ ಇನ್ಸ್​​ಪೆಕ್ಟರ್ ಇಬ್ಬರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪಾಂಡವಪುರದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ನಿನ್ನೆ ಪಾಂಡವಪುರದ ಆರ್‌ಎಸ್‌ಎಸ್ ಕಚೇರಿಗೆ ಬಜರಂಗದಳ, ವಿಹೆಚ್​​ಪಿ ಮುಖಂಡರ ಬಂಧನಕ್ಕೆ‌ ತೆರಳಿದ್ದ ಪೊಲೀಸರು ಶೂ ಧರಿಸಿಕೊಂಡೇ ಕಚೇರಿಯಲ್ಲಿ‌ ಓಡಾಡಿದ್ದಾರೆ. ನಾವು ನಮ್ಮ ಕಚೇರಿಯನ್ನು ದೇವಸ್ಥಾನ ಎಂದುಕೊಂಡಿದ್ದೇವೆ. ನಮ್ಮ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ. ಡಿವೈಎಸ್‌ಪಿ ಹಾಗೂ ಇನ್ಸ್​​​ಪೆಕ್ಟರ್ ಇಬ್ಬರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಮತ್ತೊಂದೆಡೆ ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ, ‘ಸಂಘದ ಪ್ರಚಾರಕರ ಮೇಲೆ ದೌರ್ಜನ್ಯ ನಡೆಸಿದ್ದು ಅಕ್ಷಮ್ಯ’ ಎಂದು ಉಲ್ಲೇಖಿಸಿ ಘಟನೆಯನ್ನು ಖಂಡಿಸಿದೆ.

‘‘ಮಂಡ್ಯ ಜಿಲ್ಲೆಯ ಪಾಂಡವಪುರದ ಆರ್‌ಎಸ್‌ಎಸ್ ಕಾರ್ಯಾಲಯಕ್ಕೆ ರಾತ್ರೋರಾತ್ರಿ ಪೊಲೀಸರು ನುಗ್ಗಿ, ಸಂಘದ ಪ್ರಚಾರಕರ ಮೇಲೆ ದೌರ್ಜನ್ಯ ನಡೆಸಿದ್ದು ಅಕ್ಷಮ್ಯ. ಸಂಘದ ಕಾರ್ಯಾಲಯಕ್ಕೆ ಸಕಾರಣವಿಲ್ಲದೆ ದಾಳಿ ನಡೆಸಿದ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರಾಜಕತೆ ಹೆಚ್ಚಾಗಿದ್ದು, ಹಿಂದೂಗಳನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡುವ ಸನ್ನಿವೇಶ ಸೃಷ್ಟಿಸುತ್ತಿದೆ’’ ಎಂದು ಬಿಜೆಪಿ ಉಲ್ಲೇಖಿಸಿದೆ.

ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಅಸ್ಥಿರತೆ ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಹಿಂದೂಗಳಿಗೆ ಬಹಿರಂಗ ಸವಾಲು ಎಸೆಯುವ ಮತಾಂಧರನ್ನು ಸ್ವತಂತ್ರವಾಗಿರಲು ಬಿಟ್ಟು, ರಾಷ್ಟ್ರಭಕ್ತ ಸ್ವಯಂಸೇವಕರ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಕಾಂಗ್ರೆಸ್ಸಿನ ಹಿಟ್ಲರ್ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ಟೀಕಿಸಿದೆ.

RELATED ARTICLES
- Advertisment -
Google search engine

Most Popular