ಮಂಗಳೂರು (ದಕ್ಷಿಣ ಕನ್ನಡ): ಸುಳ್ಳನ್ನು ಸತ್ಯ ಮಾಡುವುದೇ ಆರೆಸ್ಸೆಸ್ ಕೆಲಸ. ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂದು ತರಬೇತಿ ಕೊಡುತ್ತಾರೆ. ಬಿಜೆಪಿ, ಸಂಘ ಪರಿವಾರದಲ್ಲಿ ಇದಕ್ಕೆಂದೆ ತರಬೇತಿ ಇರುತ್ತದೆ ಎಂದು ರಾಜ್ಯಾ ಆರೋಗ್ಯ ಮತ್ತು ಕಲ್ಯಾಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮೈಸೂರಿನ ಮುಡಾ ಹಗರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಸುಮ್ಮನೆ ಬೊಬ್ಬೆ ಹಾಕಿ ಸುಳ್ಳನ್ನು ಸತ್ಯ ಮಾಡಲು ದೇಶಾದ್ಯಂತ ಯತ್ನಿಸುತ್ತಿದ್ದಾರೆ. ಅವರ ವ್ಯವಸ್ಥೆಯೇ ಅದೇ ರೀತಿ. ಅದನ್ನೇ ಇಲ್ಲಿ ಸಹ ಮಾಡಲು ಹೊರಟಿದ್ದಾರೆ ಎಂದರು.