ಬೆಂಗಳೂರು: ಕಡ್ಡಾಯ ಶಿಕ್ಷಣ ಕಾಯ್ದೆ (ಆರ್‌ಟಿಇ) ಅಡಿ ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆಗೆ ಮೇ ೨೦ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ಅವಧಿ ಏಪ್ರಿಲ್ ೨೨ಕ್ಕೆ ಮುಕ್ತಾಯವಾಗಿತ್ತು. ಪೋಷಕರ ಕೋರಿಕೆಯ ಮೇರೆಗೆ ಅವಧಿ ವಿಸ್ತರಿಸಲಾಗಿದೆ. ಜೂನ್ ೧ರಂದು ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ೫ರಂದು ಸೀಟು ಹಂಚಿಕೆ ಮಾಡಲಾಗುವುದು. ೬ರಿಂದ ೧೩ರವರೆಗೆ ಪ್ರವೇಶ ಪಡೆಯಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಹೇಳಿದ್ದಾರೆ.