Saturday, February 14, 2026
Google search engine

Homeರಾಜ್ಯಸುದ್ದಿಜಾಲಭೀಮಾಂಬಿಕಾ ದೇವಿ ಜಾತ್ರಾ ಮಹೋತ್ಸವ

ಭೀಮಾಂಬಿಕಾ ದೇವಿ ಜಾತ್ರಾ ಮಹೋತ್ಸವ

ಇಳಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕು ಮುರಡಿ ಗ್ರಾಮದಲ್ಲಿ ಶನಿವಾರ ಭೀಮಾಂಬಿಕಾ ದೇವಿ ಜಾತ್ರಾ ಮಹೋತ್ಸವ ಸಡಗರದಿಂದ ಜರುಗಿತು. ಜಾತ್ರಾ ಮಹೋತ್ಸವ ಅಂಗವಾಗಿ ದೇವಿಗೆ ಮಹಾ ರುದ್ರಾಭಿಷೇಕ ಹಾಗೂ ಕುಂಭೋತ್ಸವ ನೆರವೇರಿತು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಂಜುನಾಥ ಪಾಟೀಲ, ಕಲ್ಲಪ್ಪ ಅಮರಗಟ್ಟಿ, ಮಹೇಶ ಹಿರೇಮಠ, ಲಕ್ಷ್ಮಮ್ಮ ಧರ್ಮರ, ಉಮ್ಮಪ್ಪ ವಕ್ರ, ಅಮರೇಶ ಹಿರೇಮಠ ಸೇರಿದಂತೆ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.


RELATED ARTICLES
- Advertisment -
Google search engine

Most Popular