Friday, April 11, 2025
Google search engine

Homeರಾಜಕೀಯಆರ್.ವಿ.ದೇಶಪಾಂಡೆ ಕಾಂಗ್ರೆಸ್ ನ ಹಿರಿಯ ಶಾಸಕರು, ಆಸೆ ಪಡುವುದರಲ್ಲಿ ತಪ್ಪಿಲ್ಲ: ಶಿವಾನಂದ ಪಾಟೀಲ್

ಆರ್.ವಿ.ದೇಶಪಾಂಡೆ ಕಾಂಗ್ರೆಸ್ ನ ಹಿರಿಯ ಶಾಸಕರು, ಆಸೆ ಪಡುವುದರಲ್ಲಿ ತಪ್ಪಿಲ್ಲ: ಶಿವಾನಂದ ಪಾಟೀಲ್

ಬೆಳಗಾವಿ: ಆರ್.ವಿ.ದೇಶಪಾಂಡೆ ಅವರು ಹೈಕಮಾಂಡ್ ಒಪ್ಪಿದರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದು ಅದು ಅವರ ವೈಯಕ್ತಿಕ ಹೇಳಿಕೆ. ಅಲ್ಲದೆ ಅವರು ಕಾಂಗ್ರೆಸ್ ನ ಹಿರಿಯ ಶಾಸಕರಿದ್ದಾರೆ. ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ.

ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚಿಂತೆ ನಡೆದಿಲ್ಲ. ಹೈಕಮಾಂಡ್ ಇದೆ. ಇದರ ಬಗ್ಗೆ ಶಾಸಕಾಂಗ ಸಭೆಯಲ್ಲಿ ನಿರ್ಣಯವಾಗಬೇಕು . ಮುಖ್ಯಮಂತ್ರಿಯಾಗುವ ಆಸೆ ಎಲ್ಲರಲ್ಲಿಯೂ ಇದೆ. ಆದರೆ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ‌ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದವರಾಗಬೇಕು ಎಂಬ ವಿಚಾರ ಅಲ್ಲ. ಇವಲ್ಲ ಪ್ರಶ್ನೆ ಉದ್ಬವಿಸುವುದು ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟ ಮೇಲೆ. ಎಲ್ಲ ಶಾಸಕ, ಸಚಿವರು ಸಿದ್ದರಾಮಯ್ಯ ಅವರ ಪರವಾಗಿ ಇದ್ದಾರೆ ಎಂದು‌ ಸ್ಪಷ್ಟನೆ ನೀಡಿದರು.

ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಕಳೆದ ಆರು ತಿಂಗಳ ಹಿಂದೆ ನಾವೇ ಮುಖ್ಯಮಂತ್ರಿಯವರಿಗೆ ಭೇಟಿ ಮಾಡಿಸಿದ್ದೇವೆ. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕೊಡುವ ವಿಚಾರ ಬಂದಾಗ ಮುಖ್ಯಮಂತ್ರಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದರು.

RELATED ARTICLES
- Advertisment -
Google search engine

Most Popular