ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ನಡೆಯನ್ನು ಖಂಡಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೆಂಡಾಮಂಡಲರಾಗಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೊಡಗಿನ ಬಿಜೆಪಿ ಕಾರ್ಯಕರ್ತರಾದ ವಿನಯ್ ಎಂಬುವವರು ಕಾಂಗ್ರೆಸ್ ನ ಕೆಲ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಬೆದರಿಕೆಯೊಡ್ಡಿದ್ದ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುರದೃಷ್ಟಕರ ಎಂದಿದ್ದಾರೆ.
ಇಷ್ಟೆಲ್ಲಾ ಆಗುತ್ತಿದ್ದರೂ ಬಿಜೆಪಿ ಕರ್ನಾಟಕ ಘಟಕವು ವಿನಯ್ ಅವರಿಗೆ ಯಾವುದೇ ಕಾನೂನು ನೆರವು ನೀಡದೆ ಈಗ ಟ್ವಿಟ್ಟರ್ನಲ್ಲಿ ಆರ್ಭಟಿಸುತ್ತಿರುವುದು ಇವರ ಆದ್ಯತೆಗಳನ್ನು ತೋರಿಸುತ್ತದೆ ಎಂಬುದಾಗಿ ಗುಡುಗಿದ್ದಾರೆ.