Thursday, May 14, 2026
Google search engine

Homeರಾಜಕೀಯಕೇಸರಿ ಶಾಲು ಜೊತೆ ಕೇಸರಿ ಪೇಟಕ್ಕೂ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ

ಕೇಸರಿ ಶಾಲು ಜೊತೆ ಕೇಸರಿ ಪೇಟಕ್ಕೂ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ

ಶಾಲೆಗಳಿಗೆ ಕೇಸರಿ ಶಾಲು ಜೊತೆಗೆ ಕೇಸರಿ ಪೇಟವನ್ನ ಸಹ ಹಾಕಿಕೊಂಡು ಬರುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೊದಲಿನಿಂದ ಯಾವ ಪೇಟಗಳಿವೆ ಆ ಪೇಟಗಳಿಗಷ್ಟೇ ಅವಕಾಶ ನೀಡಲಾಗಿದೆ. ಈಗ ಪೇಟದ ಬಣ್ಣ ಬದಲಾಯಿಸಿಕೊಂಡು ಬಂದರೆ ಅವಕಾಶ ಮಾಡಿಕೊಡುವುದಿಲ್ಲ. ಹಿಜಬ್‌ಗೆ ಮಾತ್ರ ಅವಕಾಶ ಕೊಟ್ಟಿಲ್ಲ. ಜನಿವಾರ, ಶಿವಧಾರ, ಪೇಟಕ್ಕೂ ಅವಕಾಶ ಕೊಟ್ಟಿದ್ದೇವೆ. ಆದರೆ ಹೊಸ ರೂಪದ ಪೇಟಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು. 

ಹೈಕಮಾಂಡ್‌ ಭೇಟಿ ಬಗ್ಗೆ ಮಾತನಾಡಿದ ಅವರು, ನನ್ನನ್ನ ಹೈಕಮಾಂಡ್ ಕರೆದಿಲ್ಲ. ಹೀಗಾಗಿ ನಾನು ಸದ್ಯಕ್ಕೆ ದೆಹಲಿಗೆ ಹೋಗುವುದಿಲ್ಲ. ಮೇ 15 ರಂದು ದೆಹಲಿಗೆ ಹೋಗುತ್ತೇನೆಂದು ಹೇಳಿದವರು ಯಾರು? ನಿಶ್ಚಿತ ದಿನಾಂಕವನ್ನು ನೀವೆ ಯಾಕೆ ನಿಗದಿ ಮಾಡಿದ್ದೀರಿ ? ಹೈಕಮಾಂಡ್ ಕರೆದಾಗ ಹೋಗುತ್ತೇನೆ. ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಿದರೆ, ಪುನಾರಚನೆ ಮಾಡುತ್ತೇನೆ ಎಂದರು.

ಮೈಸೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು, ಎರಡನೇ ಬಾರಿ ಸಿಎಂ ಆದ ಮೇಲೆ ಮೊದಲ ಬಾರಿ ಮೈಸೂರು ನಗರದ ಹಲವು ಭಾಗಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.

ಕೆ.ಎಸ್.ಐ.ಸಿ ಹತ್ತಿರ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ನಡೆಯುತ್ತಿರುವ ಯು.ಜಿ ಕೇಬಲಿಂಗ್ ಕಾಮಗಾರಿ, ಮಾನಂದವಾಡಿ ರಸ್ತೆಯ ಎನ್.ಐ ಇ ಕಾಲೇಜಿನ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ, ಮೆಟ್ರೋಪೋಲ್ ಸರ್ಕಲ್ ಬಳಿ ಕೆ.ಹೆಚ್.ಬಿ ಮಹಾರಾಣಿ ಕಾಲೇಜು ಕಾಮಗಾರಿ ಪರಿಶೀಲನೆ ಜೊತೆಗೆ ಬನ್ನಿ ಮಂಟಪದ ಹತ್ತಿರದ ಹೊಸ ಸರ್ಕಾರಿ ಬಸ್ ನಿಲ್ದಾಣ ಕಾಮಗಾರಿಯನ್ನ ಸಿಎಂ ಪರಿಶೀಲಿಸಿದರು.  

RELATED ARTICLES
- Advertisment -
Google search engine

Most Popular