Friday, April 18, 2025
Google search engine

Homeಸಿನಿಮಾಮಹಿಳಾ ಕ್ರಿಕೆಟ್ ಆಧರಿತ ಸಿನಿಮಾ ಸಹಾರಾ ಜೂನ್ 7ಕ್ಕೆ ರಾಜ್ಯಾದ್ಯಂತ ಬಿಡುಗಡೆ

ಮಹಿಳಾ ಕ್ರಿಕೆಟ್ ಆಧರಿತ ಸಿನಿಮಾ ಸಹಾರಾ ಜೂನ್ 7ಕ್ಕೆ ರಾಜ್ಯಾದ್ಯಂತ ಬಿಡುಗಡೆ

ಮೈಸೂರು: ಮಹಿಳಾ ಕ್ರಿಕೆಟ್ ಆಧರಿತ ಸಹಾರಾ ಶೀರ್ಷಿಕೆಯ ಸಿನಿಮಾ ಇದೇ ಜೂ. 7 ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಹೀಗಾಗಿ ಜನತೆ ಚಿತ್ರಮಂದಿರಗಳಿಗೆ ಧಾವಿಸಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ನಾಯಕಿ ನಟಿ ಪಾತ್ರ ವಹಿಸಿರುವ ಸಾರಿಕಾ ರಾವ್ ಅವರು ಪತ್ರಿಕಾ ಗೋಷ್ಠಿಯಲ್ಲಿ ಮನವಿ ಮಾಡಿದರು.

ನಗರದಲ್ಲಿ ಸುದ್ದಿಗಾರರೊಡನ ಮಾತನಾಡಿ, ಪುರುಷರ ಕ್ರಿಕೆಟ್‌ಗೆ ಹೆಚ್ಚು ಪ್ರಾಧಾನ್ಯತೆ ನೀಡಿ, ಮಹಿಳಾ ಕ್ರಿಕೆಟ್ ಕಡೆಗಣಿಸಲಾಗಿದೆ. ಹೀಗಾಗಿ ಮಂಡ್ಯ ಮೂಲಕ ಗ್ರಾಮೀಣ ಪ್ರದೇಶದ ಯುವತಿಯೊಬ್ಬರು ಕ್ರಿಕೆಟ್‌ನಲ್ಲಿ ಸಮಸ್ಯೆ ಎದುರಿಸಿ ಮಾಡುವ ಸಾಧನೆಯ ಎಳೆಯನ್ನು ಈ ಚಿತ್ರ ಹೊಂದಿದೆ ಎಂದು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.

ಇನ್ನು ಭಾರತ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸ್ ಸುನಿಲ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಂಜೇಶ್ ಭಗವತ್ ನಿರ್ಮಾಣದ ಜೊತೆಗೆ ನಿರ್ದೇಶನ ಮಾಡಿದ್ದಾರೆಂದರು.

ನಂಜನಗೂಡಿನ ಕಳಲೆ ಗ್ರಾಮ ಮತ್ತು ನಗರದ ಸುತ್ತಮುತ್ತ ಚಿತ್ರೀಕರಣ ನಡೆದಿದೆ ಎಂದು ಮಾಹಿತಿ ನೀಡಿದರು.

ಈ ಸಂಧರ್ಭದಲ್ಲಿ ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರು ಮಂಜೇಶ್ ಭಗವತ್, ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಬೀಡನಹಳ್ಳಿ ಸತೀಶ್‌ ಗೌಡ, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದರಾಜು ಲಯನ್ ಲೋಕೇಶ್ ಸೇರಿ ಇನ್ನಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular