ಮಂಡ್ಯ: ಸಾಲಬಾಧೆಗೆ ಬೇಸತ್ತು ರೈತ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಬಿಳಿದೇಗಲು ಗ್ರಾಮದಲ್ಲಿ ನಡೆದಿದೆ .ಬಿ.ಸಿ.ಸ್ವಾಮಿ(48) ಆತ್ಮಹತ್ಯೆ ಮಾಡಿಕೊಂಡ ರೈತ.
ಟ್ರ್ಯಾಕ್ಟರ್ ಸಾಲ, ಬೆಳೆ ಸಾಲ, ಕೈ ಸಾಲ ಸೇರಿದಂತೆ ಹತ್ತು ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ ರೈತ.ಇತ್ತೀಚೆಗೆ ಆಲೆಮನೆ ಬೆಂಕಿಗಾಹುತಿಯಾಗಿ ನಷ್ಟವಾಗಿತ್ತು.ಎರಡು ಎಕರೆ ಜಮೀನು ಹೊಂದಿದ್ದ ಮೃತ ಸ್ವಾಮಿ. ನಿನ್ನೆ ಸಂಜೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ