ಚಾಮರಾಜನಗರ: ಜೈಹಿಂದ್ ಪ್ರತಿಷ್ಠಾನ ಹಾಗೂ ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಮಾರ್ಚ್ 12ರ ಮಂಗಳವಾರ ಬೆಳಗ್ಗೆ 9:15ಕ್ಕೆ ನಗರದ ಜೈ ಹಿಂದ್ ಕಟ್ಟೆಯಲ್ಲಿ ಸ್ವಾತಂತ್ರ್ಯ ಚಳುವಳಿಯಲ್ಲಿ ಬಹಳ ಪ್ರಮುಖ ಚಳುವಳಿಯಾದ ದಂಡಿ ಸತ್ಯಾಗ್ರಹ ಅಥವಾ ಉಪ್ಪಿನ ಸತ್ಯಾಗ್ರಹ ಒಂದು ನೆನಪು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಋಗ್ವೇದಿ ಯೂತ್ ಕ್ಲಬ್ ನ ಶ್ರಾವ್ಯ ಎಸ್ ಋಗ್ವೇದಿ ತಿಳಿಸಿದ್ದಾರೆ .