ಬೆಂಗಳೂರು : ಸಾಲುಮರದ ತಿಮ್ಮಕ್ಕ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಜಯನಗರ ಆಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ನೂರಾರು ಮರಗಳ ಪಾಲನೆ ಪೋಷಣೆ ಮೂಲಕ ವೃಕ್ಷಮಾತೆಯೆಂದೇ ಹೆಸರಾಗಿರುವ ಸಾಲುಮರದ ತಿಮ್ಮಕ್ಕ, ಈವರೆಗೆ ಲಕ್ಷಾಂತರ ಸಸಿ ನೆಟ್ಟಿದ್ದಾರೆ. ೧೭ ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಅವರು ಬಳಲುತ್ತಿದ್ದಾರೆ. ೧೧೩ ವರ್ಷದ ಅವರು ವಯೋಸಹಜ ಅನಾರೋಗ್ಯಕ್ಕೀಡಾಗಿದ್ದಾರೆ.