ದಾವಣಗೆರೆ : ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಮೊಮ್ಮಗ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭವಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್ ಮರಳಿ ತೆಕ್ಕೆಗೆ ಪಡೆದಿದೆ.
ಕಾಂಗ್ರೆಸ್ನ ಸಮರ್ಥ್ ಶಾಮನೂರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪ ವಿರುದ್ಧ 5,708 ಮತಗಳ ಅಂತರದಿ0ದ ಜಯ ಸಾಧಿಸಿದ್ದಾರೆ. ಸಮರ್ಥ್ ಶಾಮನೂರುಗೆ 69,578 ಮತಗಳು ಬಿದ್ದಿದ್ದರೆ, ಶ್ರೀನಿವಾಸ ಟಿ.ದಾಸ ಕರಿಯಪ್ಪ 63,870 ಮತಗಳನ್ನು ಪಡೆದಿದ್ದಾರೆ. ಇನ್ನು ಎಸ್ಡಿಪಿಐನ ಅಫ್ಸರ್ ಕೊಡ್ಲಿಪೇಟೆಗೆ 18975 ಮತಗಳು ಮತ್ತು ನೋಟಾಗೆ 511 ಮತಗಳು ಚಲಾವಣೆಯಾಗಿವೆ.



