ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದು ಬೀಗಿದ್ದಾರೆ.
ಈ ಕ್ಷೇತ್ರದಲ್ಲಿ ಸಮರ್ಥ್ ಶಾಮನೂರು ವಿರುದ್ದ ನಿಂತಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪಗೆ ಸೋಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಸೋಲನ್ನ ಅನುಭವಿಸಿದೆ.
ಸಮರ್ಥ್ ಶಾಮನೂರು ಗೆಲುವಿನ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ಕೆಲವರು ಮುಸ್ಲಿಂ ಮತಗಳು ವಿಭಜನೆ ಆಗುವಂತೆ ಮಾಡಿದ್ದು, ಕಾಂಗ್ರೆಸ್ನ 22 ಸಾವಿರ ಮತಗಳು ಬೇರೆಯವರ ಪಾಲಾಗಿವೆ. ಹೀಗಾಗಿಯೇ ಇದಕ್ಕೆ ಕಾರಣರಾದ ಮುಖಂಡರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಮುಸ್ಲಿಂ ಮುಖಂಡ ಅಮಾನತ್ತನ್ನು ಕಾರ್ಯಕರ್ತರು ಸಮರ್ಥಿಸಿಕೊಂಡಿದ್ದಾರೆ.



