Thursday, April 17, 2025
Google search engine

Homeರಾಜ್ಯಸಂಕ್ರಾಂತಿ ಹಬ್ಬ ಹಿನ್ನೆಲೆ : NWKSRTC ವಿಶೇಷ ಬಸ್‌ಗಳ​ ವ್ಯವಸ್ಥೆ

ಸಂಕ್ರಾಂತಿ ಹಬ್ಬ ಹಿನ್ನೆಲೆ : NWKSRTC ವಿಶೇಷ ಬಸ್‌ಗಳ​ ವ್ಯವಸ್ಥೆ

ಹುಬ್ಬಳ್ಳಿ : ಇನ್ನೇನು ಕೆಲವೇ ದಿನಗಳಲ್ಲಿ ಸಂಕ್ರಾಂತಿ ಹಬ್ಬ ಸಮೀಪಸಿದ್ದು, ಹೀಗಾಗಿ ಬೇರೆ ಊರುಗಳಿಗೆ ತೆರಳಲು NWKSRTC ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು, ಎರಡನೇ ಶನಿವಾರ, ಭಾನುವಾರ ಸೇರಿದಂತೆ ಸರಣಿ ರಜೆಗಳಿರುವ ಕಾರಣ ಸಂಕ್ರಾಂತಿ ಹಬ್ಬಕ್ಕೆ ಬೇರೆ ಬೇರೆ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ವಾಯವ್ಯ ಸಾರಿಗೆ ವಿಶೇಷ ಬಸ್​ ಸೌಲಭ್ಯ ಕಲ್ಪಿಸಿದೆ.

ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮೂರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 114 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಾಯುವ್ಯ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಿಂದ ರಾಜ್ಯ/ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಶುಕ್ರವಾರ, 11 ಹಾಗೂ 13 ರಂದು ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ 14 ಹಾಗೂ 15 ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ‌ ನಡೆಸಲಿವೆ.

RELATED ARTICLES
- Advertisment -
Google search engine

Most Popular