ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಕರಾವಳಿ ಶ್ರೀ ಸೇವಾಲಾಲ್ ಬಂಜಾರ (ಲಂಬಾಣಿ) ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಮಂಗಳೂರು ನಗರದ ಶ್ರೀ ವಾಲ್ಮೀಕಿ ಆಶ್ರಮ ಶಾಲೆ ಪದವು ಇಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾಧ್ಯಾಪಕ ಡಾ. ದಿನಕರ ಪಚ್ಚನಾಡಿ ಉದ್ಘಾಟಿಸಿ ಮಾತನಾಡಿದರು. ಶ್ರೀ ಸಂತ ಸೇವಾಲಾಲ್ ಅವರು ಸತ್ಯ, ಅಹಿಂಸೆ ಹಾಗೂ ವ್ಯಸನ ಮುಕ್ತ ಬದುಕು ರೂಪಿಸಲು ಬೋಧನೆ ಮಾಡಿ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ದುಡಿದವರು ಅವರ ಆದರ್ಶ ಗುಣ ನಮಗೆಲ್ಲಾ ಪ್ರೇರಣೆಯಾಗಿದೆ ಎಂದರು. ಇಂದಿನ ಯುವ ಪೀಳಿಗೆಯ ಈ ಮಹಾನ್ ಸಂತರ ವಿಚಾರ ತತ್ವವನ್ನು ಅರ್ಥ ಮಾಡಿಕೊಳ್ಳಬೇಕು. ಆ ತತ್ವವೇ ಬದುಕಿಗೆ ದಾರಿದೀಪವಾಗಿದೆ. ಸಮಾಜದ ಏಳಿಗೆಗೆ ಎಲ್ಲರೂ ಒಗ್ಗೂಡಿ ಶ್ರಮಿಸಬೇಕು ಎಂದು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿದರು. ವಾಲ್ಮೀಕಿ ಆಶ್ರಮ ಶಾಲೆಯ ಮೇಲ್ವಿಚಾರಕರಾದ ಎಂ. ಸರಸ್ವತಿ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಗಣ್ಯರು ಪುಷ್ಪಾರ್ಪಣೆ ಮಾಡಿದರು.
ವರದಿ: ಶಂಶೀರ್ ಬುಡೋಳಿ



