ಜಿಲ್ಲೆಯ ಸರಕಾರಿ ಆಸ್ಪತ್ರೆಗಳ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಮಂಗಳೂರು ಸೇರಿದಂತೆ 5 ತಾಲೂಕುಗಳಲ್ಲಿ ಸರಕಾರಿ ತಾಲೂಕು ಆಸ್ಪತ್ರೆಗಳೇ ಇಲ್ಲ. ಆದರೆ ಈ ಎಲ್ಲಾ ಕ್ದೇತ್ರದಲ್ಲಿರುವ ಶಾಸಕರುಗಳ ಪ್ರತಿಷ್ಟೆಗೆ ಕಂಬಳ ಬೇಕು ಅಲ್ಲಿಗೆ ಸರಕಾರಿ ಆಸ್ಪತ್ರೆ ಇರಬೇಕೆಂಬ ಇಚ್ಚಾಶಕ್ತಿಯೇ ಇಲ್ಲದಿರೋದು ಖೇದಕರ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ದ.ಕ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ, ಜಯದೇವ, ಕಿದ್ವಾಯಿ, ನಿಮಾನ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆಗೆ ಒತ್ತಾಯಿಸಿ, ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಇಂದು ಮಿನಿವಿಧಾನ ಸೌಧದ ಮುಂಭಾಗ ನಡೆದ ಪ್ರತಿಭಟನಾ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.
ದ.ಕ ಜಿಲ್ಲೆಯಲ್ಲಿ ಒಂದು ವೇಳೆ ಬ್ರಿಟೀಷರು ವೆನ್ಲಾಕ್ , ಲೇಡಿಗೋಶನ್ ಆಸ್ಪತ್ರೆ ಕಟ್ಟದೇ ಇರುತ್ತಿದ್ದರೆ ನಮ್ಮ ಜಿಲ್ಲೆಯ ಆರೋಗ್ಯ ಕ್ಷೇತ್ರದ ಪರಿಸ್ಥಿತಿ ಹೇಗಿರುತ್ತಿತ್ತು ಲೂಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಮ್ಮ ನಡುವಿನಿಂದ ಆರಿಸಿ ಕಳುಹಿಸಿದ ಜನಪ್ರತಿನಿಧಿಗಳು ಜನರ ಬದುಕಿನ ಪ್ರಶ್ನೆಗಳ ಬಗ್ಗೆ ಮಾತೇ ಆಡುತ್ತಿಲ್ಲ. ವಿರೋಧ ಪಕ್ಷದಲ್ಲಿ ಕೂತಂತಹ ಬಿಜೆಪಿಯ ಒಬ್ಬನೇ ಒಬ್ಬ ಶಾಸಕರುಗಳು ಕೂಡಾ ಜಿಲ್ಲೆಯ ಸರಕಾರಿ ಆಸ್ಪತ್ರೆಗಳ ಅವ್ಯವಸ್ಥೆಯ ಬಗ್ಗೆ ಮಾತಾಡುತ್ತಿಲ್ಲ ಅಂದರೆ ಇವರ್ಯಾರೂ ಖಾಸಗೀ ಆಸ್ಪತ್ರೆಗಳನ್ನು ಎದುರು ಹಾಕಿಕೊಳ್ಳಲು ತಯಾರಿಲ್ಲ ಎಂದೇ ಅರ್ಥ. ಹಾಗಾಗಿ ಇವರು ಯಾರ ಪರವಾಗಿ ಇದ್ದಾರೆಂದು ಇವರ ನಡವಳಿಕೆಯಲ್ಲೇ ಸ್ಪಷ್ಟವಾಗುತ್ತದೆ. ಡಿವೈಎಫ್ಐ ಸರಕಾರದ ಮುಂದಿಟ್ಟಿರುವ ಬೇಡಿಕೆ ಈಡೇರುವವರೆಗೂ ಹೋರಾಟ ರೂಪಿಸಲಿದೆ ಎಂದರು.
ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿಕೆ ಇಮ್ತಿಯಾಜ್ ಮಾತನಾಡುತ್ತಾ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ದುಡ್ಡಿಲ್ಲದವರೆಗೆ ಚಿಕಿತ್ಸೆ ಇಲ್ಲ. ಒಂದೇ ರೀತಿಯ ಆರೋಗ್ಯ ಕ್ರಮಗಳಿಗೆ ಬೇರೆ ಬೇರೆ ದರವನ್ನು ವಿಧಿಸುವ ಖಾಸಗಿ ಆಸ್ಪತ್ರೆಗಳ ಮೇಲೆ ಯಾವುದೇ ನಿಯಂತ್ರಣಗಳಿಲ್ಲ. ಇಂದು ರೋಗ ಬಂದಾಗ ಭಿಕ್ಷೆ ಎತ್ತುವ ಪರಿಸ್ಥಿತಿ ಜಿಲ್ಲೆಯ ಜನರಲ್ಲಿದೆ. ಇಲ್ಲಿನ ಶಾಸಕರುಗಳು ಕಂಬಳ ಕೋಳಿಯಂಕದ ವಿಚಾರಗಳನ್ನು ಬಿಟ್ಟು ಇನ್ನಾದರೂ ಜನರ ಆರೋಗ್ಯದ ಕುರಿತು ಮಾತನಾಡುವಂಥಾಗಲಿ ಎಂದರು.
ಧರಣಿಯನ್ನು ಉದ್ದೇಶಿಸಿ ವಿಚಾರವಾದಿ ಪ್ರೊ ನರೇಂದ್ರ ನಾಯಕ್, ಸಮುದಾಯ ಸಂಘಟನೆಯ ರಾಜ್ಯ ಕಾರ್ಯದರ್ಶಿ,adv ಮನೋಜ್ ವಾಮಂಜೂರು , ಶ್ಯಾಮ್ ಸುಂದರ್, ಡಿವೈಎಫ್ಐ ಉಳ್ಳಾಲ ತಾಲೂಕು ಅಧ್ಯಕ್ಷರಾದ adv ನಿತಿನ್ ಕುತ್ತಾರ್, ದಲಿತ ಸಂಘಟನೆಯ ಮುಖಂಡ ಕಮಲಾಕ್ಷ ಬಜಾಲ್, ಡಿವೈಎಫ್ಐ ಮುಖಂಡ ಚರಣ್ ಶೆಟ್ಟಿ, ಮಾಧುರಿ ಬೋಳಾರ್ ಮಾತನಾಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಮಿಕ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಸಾಮಾಜಿಕ ಕಾರ್ಯಕರ್ತ ಜೆರಾಲ್ಡ್ ಟವರ್, ರಮೇಶ್ ಉಳ್ಳಾಲ, ಜನವಾದಿ ಮಹಿಳಾ ಸಂಘಟನೆಯ ಭಾರತಿ ಬೋಳಾರ, ಅಸುಂತ ಡಿಸೋಜ, ಯೋಗಿತಾ ಉಳ್ಳಾಲ, ಶಿಳ್ಳೆಕ್ಯಾತ ಅಲೆಮಾರಿ ಸಮುದಾಯ ಸಂಘಟನೆಯ ಮುಖಂಡರಾದ ವೆಂಕಟೇಶ್, ಡಿವೈಎಫ್ಐ ಜಿಲ್ಲಾ ಮುಖಂಡರಾದ ರಿಜ್ವಾನ್ ಹರೇಕಳ, ಜಗದೀಶ್ ಬಜಾಲ್, ರಜಾಕ್ ಮುಡಿಪು, ಅಶ್ರಫ್ ಹರೇಕಳ ಸುನೀಲ್ ತೇವುಲ, ಭರತ್ ಕುತ್ತಾರ್, ಅಭಿಷೇಕ್ ಬೆಳ್ತಂಗಡಿ, ಹನೀಫ್ ಬೆಂಗರೆ, ಬೀದಿಬದಿ ವ್ಯಾಪಾರಸ್ಥರ ಸಂಘಟನೆಯ ಮುಝಾಫರ್, ಪ್ರವೀಣ್ ಕೊಂಚಾಡಿ, ಅನಿಲ್ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.
ಪ್ರತಿಭಟನಾ ಧರಣಿ ಸ್ಥಳಕ್ಕಾಗಮಿಸಿದ ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ ಪ್ರಜಯ್ ಧರಣಿ ನಿರತರಿಂದ ಬೇಡಿಕೆಗಳುಳ್ಳ ಮನವಿಯನ್ನು ಸ್ವೀಕರಿಸಿದರು. ಡಿವೈಎಫ್ಐ ಸರಕಾರದ ಮುಂದಿಟ್ಟಿರುವ ಬೇಡಿಕೆಗಳನ್ನು ಸರಕಾರದ ಸಂಬಂಧಪಟ್ಟ ಇಲಾಖೆಗಳ ಮತ್ತು ಆರೋಗ್ಯ ಮಂತ್ರಿಯ ಗಮನಕ್ಕೆ ತರಲಾಗುವುದು ಎಂದರು.
ಪ್ರತಿಭಟನಾ ಧರಣಿಯಲ್ಲಿ ಡಿವೈಎಫ್ಐ ಮಂಗಳೂರು ನಗರ ಅಧ್ಯಕ್ಷರಾದ ನವೀನ್ ಕೊಂಚಾಡಿ ಸ್ವಾಗತಿಸಿದರು, ಕಾರ್ಯದರ್ಶಿ ತಯ್ಯೂಬ್ ಬೆಂಗರೆ ನಿರೂಪಿಸಿ ಮಾಧುರಿ ಬೋಳಾರ ವಂದಿಸಿದರು.



