Saturday, July 4, 2026
Google search engine

Homeಸಿನಿಮಾ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಜುಲೈ 24ರಂದು ರಾಜ್ಯಾದ್ಯಂತ ತೆರೆಗೆ

‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಜುಲೈ 24ರಂದು ರಾಜ್ಯಾದ್ಯಂತ ತೆರೆಗೆ

ಬೆಂಗಳೂರು : ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಸಿನಿಮಾ ತನ್ನ ವಿಭಿನ್ನ ಟೈಟಲ್‌ನಿಂದಲೇ ಪ್ರೇಕ್ಷಕರ ಗಮನ ಸೆಳೆದಿದ್ದು ನೆನಪಿರಬಹುದು. ಈಗ ಅದೇ ಮಾದರಿಯಲ್ಲಿ ಕುತೂಹಲ ಮೂಡಿಸುತ್ತಿರುವ ‘ಸರ್ಕಾರಿ ನ್ಯಾಯ ಬೆಲೆ ಅಂಗಡಿ’ ಸಿನಿಮಾ ಜುಲೈ 24ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ಮನುಷ್ಯನ ಮೂಲಭೂತ ಅಗತ್ಯಗಳಾದ ನೀರು ಮತ್ತು ಆಹಾರದ ಮಹತ್ವವನ್ನು ಸಾರುವ ಜೊತೆಗೆ, ಸರ್ಕಾರದ ಪಡಿತರ ವ್ಯವಸ್ಥೆಯ ಹಿನ್ನೆಲೆಯನ್ನು ಈ ಚಿತ್ರ ಒಳಗೊಂಡಿದೆ. ರೇಷನ್ ಅಂಗಡಿಗಳ ಪ್ರಾಮುಖ್ಯತೆ ಮತ್ತು ಅವುಗಳ ಸುತ್ತ ನಡೆಯುವ ಕಥಾಹಂದರವನ್ನು ಹೊಂದಿರುವ ದೇಶದ ಮೊದಲ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.

ಇತ್ತೀಚೆಗೆ ನಡೆದ ವಿಶೇಷ ಕಾರ್ಯಕ್ರಮವೊಂದರಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಚಿತ್ರದ ಅಧಿಕೃತ ಬಿಡುಗಡೆ ದಿನಾಂಕವನ್ನು ಘೋಷಿಸಿದರು. ಇದೇ ವೇಳೆ ಚಿತ್ರತಂಡಕ್ಕೆ ಶುಭ ಹಾರೈಸಿದ ಸಚಿವರು, ಸಿನಿಮಾದ ತಾಂತ್ರಿಕ ವರ್ಗದ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಕುಮಾರ್ ಬಂಗಾರಪ್ಪ – ರಾಗಿಣಿ ದ್ವಿವೇದಿ ಮುಖ್ಯ ಭೂಮಿಕೆ

ಜಯಶಂಕರ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ತೇಜು ಚೆಲುವಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ. ಮಾಜಿ ಸಚಿವ ಹಾಗೂ ನಟ ಕುಮಾರ್ ಬಂಗಾರಪ್ಪ, ಗ್ಲಾಮರಸ್ ನಟಿ ರಾಗಿಣಿ ದ್ವಿವೇದಿ ಮತ್ತು ಹಿರಿಯ ನಟ ದೊಡ್ಡಣ್ಣ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ಹಾಗೂ ಚಲನಚಿತ್ರ ನಿರ್ಮಾಪಕರ ಸಂಘದ ಹಾಲಿ ಕಾರ್ಯದರ್ಶಿ ಭಾ.ಮಾ. ಗಿರೀಶ್ ಅವರು ಚಿತ್ರತಂಡಕ್ಕೆ ಬೆಂಬಲವಾಗಿ ನಿಂತಿದ್ದಾರೆ.

ಅನುಭವಿ ತಂತ್ರಜ್ಞರ ಒಕ್ಕೂಟ

ಕಥೆ-ಚಿತ್ರಕಥೆ: ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ

ನಿರ್ದೇಶನ ಹಾಗೂ ಛಾಯಾಗ್ರಹಣ: ಸಾತ್ವಿಕ್ ಪವನ್

ಸಂಗೀತ: ಅನಂತ್ ಆರ್ಯನ್ ಮತ್ತು ಪ್ರವೀಣ್ (ಜಂಟಿ ನಿರ್ದೇಶನ)

ಗಾಯಕರು: ನವೀನ್ ಸಜ್ಜು, ಅನುರಾಧ ಭಟ್ ಮತ್ತು ಶಮಿತಾ ಮಲ್ನಾಡ್

‌ಗಮನ ಸೆಳೆದ ಟೈಟಲ್ ಟ್ರ್ಯಾಕ್

ಚಿತ್ರದ ಹಾಡುಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ‘ಟೈಟಲ್ ಟ್ರ್ಯಾಕ್’ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾಗೆ ಸಂಬಂಧಿಸಿದ ಎಲ್ಲಾ ಅಪ್ಡೇಟ್‌ಗಳನ್ನು ‘Aiplex Music’ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ.

ಈ ವಿಭಿನ್ನ ಕಥಾಹಂದರದ ಚಿತ್ರವನ್ನು ‘ಶ್ರೀಧರ್ ಕೃಪ ಕಂಬೈನ್ಸ್’ ಸಂಸ್ಥೆಯ ಶ್ರೀಧರ್ ಅವರು ಇಡೀ ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಜುಲೈ 24ರಂದು ಸಿನಿಮಾ ಮಂದಿರಗಳಲ್ಲಿ ಈ ‘ನ್ಯಾಯ ಬೆಲೆ ಅಂಗಡಿ’ ತೆರೆದುಕೊಳ್ಳಲಿದೆ. (ಏಜೆನ್ಸಿಸ್)

RELATED ARTICLES
- Advertisment -
Google search engine

Most Popular