Friday, April 18, 2025
Google search engine

Homeರಾಜ್ಯರಾಜಕೀಯವಾಗಿ ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ್ ಖರ್ಗೆ ಸತೀಶ್ ಜಾರಕಿಹೊಳಿ ಭೇಟಿ

ರಾಜಕೀಯವಾಗಿ ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ್ ಖರ್ಗೆ ಸತೀಶ್ ಜಾರಕಿಹೊಳಿ ಭೇಟಿ

ದೆಹಲಿ: ಮಲ್ಲಿಕಾರ್ಜುನ್ ಖರ್ಗೆಯನ್ನು ಅವರ ನಿವಾಸದಲ್ಲಿ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ರಾಜಕೀಯ ಬೆಳವಣಿಗೆ ಕುರಿತು ಸುದೀರ್ಘ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮೂಡಾ ಪ್ರಕರಣದಲ್ಲಿ ನಾವು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ. ಒಂದು ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಎದುರಾದರೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ನಾಯಕರಿಗೆ ಸಿಎಂ ಸ್ಥಾನ ಸಿಗಬೇಕು ಎಂದು ಒತ್ತಾಯಿಸುತ್ತೇವೆ ಎಂಬ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

ಎರಡು ದಿನಗಳ ಹಿಂದೆ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಗೃಹ ಸಚಿವ ಪರಮೇಶ್ವರ್ ಜೊತೆಗೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ ನಡೆಸಿದ್ದರು ಎಂದು ಹೇಳಲಾಗಿದೆ.ಇವರ ಜೊತೆಗೂ ಪ್ರಸಕ್ತ ರಾಜಕೀಯದ ವಿಚಾರ ಚರ್ಚೆಯಾಗಿದೆ ಎಂದು ಹೇಳಲಾಗುತ್ತಿದೆ.

RELATED ARTICLES
- Advertisment -
Google search engine

Most Popular