ಹುಣಸೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರನ್ನು ನಿರ್ಲಕ್ಷ್ಯ ಮಾಡುತ್ತಿದ್ದು, ಕೂಡಲೇ ಬೇಡಿಕೆ ಈಡೇರಿಸುವಂತೆ ಸತ್ಯ ಎಂ.ಎ. ಎಸ್ ಅಧ್ಯಕ್ಷ ಸತ್ಯಪ್ಪ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮದೊಂದಿಗೆ ಸತ್ಯಪ್ಪ ರವರು ಮಾತನಾಡಿ ರಾಜ್ಯದಲ್ಲಿ ಲಕ್ಷಾಂತರ ಮಂದಿ ಅಂಗನವಾಡಿ ಕಾರ್ಯಕರ್ತೆಯರು ಸೇವೆ ಸಲ್ಲಿಸುತ್ತಿದ್ದು, ಪುಟ್ಟ ಮಕ್ಕಳ ಪಾಲನೆಯೊಂದಿಗೆ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯಭಾರ ಹೆಚ್ಚಾಗಿರುತ್ತದೆ. ಸರ್ಕಾರ ಸೂಚಿಸುವ ಕೆಲಸಗಳನ್ನು ಮನೆ ಮನೆಗಳಿಗೆ ತಲುಪಿಸುವ ಹೊಣೆಯೂ ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ. ಆದರೆ ಕನಿಷ್ಠ ಜೀವನ ನಡೆಸಲು ಸಾಧ್ಯವಾಗುವಂತಹ ಗೌರವಧನ ಸರ್ಕಾರ ನೀಡಲು ಹಿಂದೇಟು ಹಾಕುತ್ತಿದೆ.
ಚುನಾವಣೆಗೂ ಮುನ್ನಾ 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುತ್ತೇವೆ ಎಂದು ಹೇಳಿರುವ ಹಾಗೂ ನುಡಿದಂತೆ ನಡೆಯುತ್ತೇವೆ ಎಂದು ಘೋಷಣೆ ಮಾಡಿರುವ ಕಾಂಗ್ರೆಸ್ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಕಳೆದ ಮೂರು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಚಳಿಗಾಳಿಗೆ ತತ್ತರಿಸುತ್ತಾ ಕನಿಷ್ಟ ಮೂಲಭೂತ ಸೌಲಭ್ಯಗಳಾದ ಶೌಚಾಲಯ, ಕುಡಿಯುವ ನೀರಿಗಾಗಿ ಪರದಾಡುತ್ತಾ ಪ್ರತಿಭಟನಾ ಸತ್ಯಾಗ್ರಾಹ ಮಾಡುತ್ತಿರುವುದನ್ನು ಕಂಡರೂ ಕಾಣದಂತೆ ಕಣ್ಮುಚ್ಚಿ ಕುಳಿತಿದೆ.
ಈಗಿರುವ ವೇತನ ಕೇವಲ 11 ಸಾವಿರಗಳಾಗಿದ್ದು, ಈ ವೇತನದಲ್ಲಿ ಜೀವನ ನಡೆಸುವುದು ದುಸ್ತರವಾಗಿದ್ಒತ್ತಾಯಿಸಿದರು್ತೆಯರಿಗೆ 25 ಸಾವಿರಹಾಗೂ ಸಹಾಯಕಿಯರಿಗೆ 12 ಸಾವಿರಗಳ ಕನಿಷ್ಟ ವೇತನ ನೀಡಬೇಕೆಂಬುದು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಯಾಗಿದೆ.
ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕೆಂದು ಮಾಧ್ಯಮದ ಮುಖಾಂತರ ಒತ್ತಾಯಿಸಿದರು.