ಮಂಗಳೂರು (ದಕ್ಷಿಣ ಕನ್ನಡ): ಸ್ಕೂಟರ್ ಮತ್ತು ಟೆಂಪೊ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಯುವಕ ಮೃತಪಟ್ಟ ಘಟನೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಡುಪದವು ಬಳಿ ಇಂದು ನಡೆದಿದೆ.
ಮೃತರನ್ನು ಅಬೂಬಕರ್ ಸಿದ್ದೀಕ್ (22) ಎಂದು ಗುರುತಿಸಲಾಗಿದೆ. ದೇರಳಕಟ್ಟೆ ಕಡೆಯಿಂದ ತೆರಳುತ್ತಿದ್ದ ಸ್ಕೂಟರ್ ಮತ್ತು ಮುಡಿಪು ಕಡೆಯಿಂದ ತೊಕ್ಕೊಟ್ಟಿನತ್ತ ಬರುತ್ತಿದ್ದ ಏಸ್ ಟೆಂಪೊ ಮಧ್ಯೆ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಸ್ಕೂಟರ್ ಭಾಗಶಃ ಟೆಂಪೊದೊಳಗೆ ನುಗ್ಗಿದ್ದು ನಜ್ಜುಗುಜ್ಜಾಗಿದೆ. ಈ ವೇಳೆ ಟೆಂಪೋದ ಮೇಲೆ ಎಸೆಯಲ್ಪಟ್ಟ ಅಬೂಬಕರ್ ಸಿದ್ದೀಕ್ ಗಂಭೀರವಾಗಿ ಗಾಯಗೊಂಡಿದ್ದರು. ಅವರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಟೆಂಪೋ ಚಾಲಕ ಕೂಡಾ ಗಾಯಗೊಂಡಿದ್ದಾರೆ.