ಮೈಸೂರು: ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಬದುಕಿಗೆ ನೇರ ಪ್ರಯೋಜನ ಆಗುತ್ತಿದೆ. ಹಾಗಾಗಿ, ನಿಯಮಾವಳಿಗಳ ಅಡಿಯ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯಡಿ ಭಾಗಶಃ ಅನುದಾನವನ್ನು ಗ್ಯಾರಂಟಿಗಳಿಗೆ ನೀಡಲಾಗಿದ್ದು, ಇಲ್ಲಿ ಎಲ್ಲಿಯೂ ಕಾಯ್ದೆಯ ನಿಯಮಾವಳಿಗಳನ್ನು ಮೀರಿಲ್ಲ ಮತ್ತು ಅದರ ಆಶಯಗಳಿಗೆ ಧಕ್ಕೆ ಆಗುವಂತೆ ನಡೆದುಕೊಂಡಿಲ್ಲ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.
ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿಯಲ್ಲಿ ೨೦೨೩-೨೪ನೇ ಸಾಲಿನಲ್ಲಿ ಒಟ್ಟಾರೆ ೩೪,೨೯೪ ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಅನುದಾನದ ಪ್ರಮಾಣ ಶೇ.೧೩ ಅಂದರೆ ಸುಮಾರು ೪,೦೩೧ ಕೋಟಿ ರೂ.ರೂಪಾಯಿಗಳಷ್ಟು ಹೆಚ್ಚಳವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮಗ್ರ ಅಭಿವೃದ್ದಿಗೆ ಬದ್ಧವಾಗಿದ್ದು, ಇದಕ್ಕೆ ಪೂರಕವಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ೨೦೧೩ರ ಸೆPನ್ ೭(ಡಿ) ಯನ್ನು ಕೈಬಿಡಬೇಕೆಂಬ ಸಮುದಾಯಗಳ ಬೇಡಿಕೆಗೆ ಸ್ಪಂದಿಸಿ ೭(ಡಿ) ಅನ್ನು ರದ್ದುಪಡಿಸುವ ಕೆಲಸ ಮಾಡಿದೆ. ಇಷ್ಟೇ ಅಲ್ಲದೇ ಪರಿಶಿಷ್ಟ ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ನೀಡುತ್ತಿದ್ದ ೫೦ ಲP ರೂ. ಗುತ್ತಿಗೆ ಮೊತ್ತದ ಪ್ರಮಾಣವನ್ನು ೧ ಕೋಟಿ ರೂ. ಏರಿಸಿದೆ. ಇದರೊಂದಿಗೆ ಪಿಟಿಸಿಎಲ್ ಕಾಯ್ದೆಗೆ ಇದ್ದ ಕಾಲಮಿತಿಯನ್ನು ರದ್ದುಪಡಿಸುವ ಮೂಲಕ ಚುನಾವಣೆಗೂ ಮುನ್ನವೇ ಭರವಸೆ ನೀಡಲಾದಂತೆ ನಮ್ಮ ಸರ್ಕಾರ ನಡೆದುಕೊಂಡಿದೆ.
ಈ ಬಾರಿಯ ಆಯವ್ಯಯದಲ್ಲಿ ೭(ಡಿ) ಅನ್ನು ರದ್ದು ಮಾಡಿದ ನಂತರದಲ್ಲಿ ೨೦೨೨-೨೩ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿ ವಿವಿಧ ಇಲಾಖೆಗಳಿಗೆ ಡೀಮ್ಡ್ ವೆಚ್ಚ ಸೇರಿ ಹಂಚಿಕೆ ಮಾಡಲಾಗಿದ್ದ ೭,೪೫೦.೮೦ ಕೋಟಿ ರೂ. ಹಣ ೨೦೨೩-೨೪ನೇ ಸಾಲಿನಲ್ಲಿ ಸುಮಾರು ೨,೭೮೭.೩೩ ಕೋಟಿಗಳಿಗೆ ಇಳಿಕೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಈ ಡೀಮ್ಡ್ ಹಂಚಿಕೆಯನ್ನು ರದ್ದುಪಡಿಸಿರುವ ಕಾರಣ ಸರ್ಕಾರದ ವಿವಿಧ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನದ ಪ್ರಮಾಣ ಕಡಿತಗೊಳಿಸಿ ಅದನ್ನು ಫಲಾನುಭವಿ ಆಧಾರಿತ ಕಾರ್ಯಕ್ರಮಗಳಿಗೆ ಹಂಚಿಕೆ ಮಾಡಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಏಳಿಗೆಗಾಗಿ ನಮ್ಮ ಸರ್ಕಾರ ಈ ಹಿಂದೆ ನುಡಿದಂತೆಯೇ ನಡೆದುಕೊಂಡಿದ್ದು ಶೋಷಿತ ಸಮುದಾಯಗಳ ಮೇಲೆ ನಮಗಿರುವುದು ಕರುಣೆ ಮಾತ್ರವಲ್ಲ ಜವಾಬ್ದಾರಿ ಎಂಬ ಸಂದೇಶವನ್ನೂ ಸಹ ಸ್ಪಷ್ಟವಾಗಿಯೇ ನೀಡಿzವೆ.
ಹೀಗಿದ್ದರೂ ಕೂಡಾ ಈ ಹಿಂದೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾಗಿದ್ದ ಹಣವನ್ನು ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ಬೇರೆ ಬೇರೆ ಕಾಮಗಾರಿಗಳಿಗೆ ಬಳಸಿಕೊಂಡಿತ್ತು. ಇಂತಹ ಪPದ ನಾಯಕರು ಈ ದಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ನಮ್ಮ ಸರ್ಕಾರದ ಬಗ್ಗೆ ಟೀಕಿಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದ್ದು ನೈತಿಕತೆ ಇಲ್ಲದೇ ಮಾತನಾಡುತ್ತಿರುವ ಇವರ ಮಾತುಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.