Friday, April 11, 2025
Google search engine

Homeರಾಜ್ಯಸುದ್ದಿಜಾಲಎಸ್ ಸಿ ಪಿ.ಟಿ ಎಸ್ ಪಿ ಹಣ ದುರ್ಬಳಕೆ : ಪ್ರತಿಭಟನೆ

ಎಸ್ ಸಿ ಪಿ.ಟಿ ಎಸ್ ಪಿ ಹಣ ದುರ್ಬಳಕೆ : ಪ್ರತಿಭಟನೆ

ಮೈಸೂರು:ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾದ ಸಚಿನ್ ರವರು ದಲಿತರಿಗೆ ಮೀಸಲ್ಲಿಟ್ಟಿರುವ SCP-TSP ಹಣದಲ್ಲಿ ಸುಮಾರು 25000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯ ದಲಿತ ವಿದ್ಯಾರ್ಥಿ ಒಕ್ಕೂಟದವರು ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಪ್ರತಿಭಟಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಅಧ್ಯಕ್ಷ ಸಚಿನ್ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿದ್ದಲ್ಲದೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶೇಕಡ 60 ಕ್ಕಿಂತ ಹೆಚ್ಚಿನ ಅಂಕ ಪಡೆದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಪ್ರಸಕ್ತ ಸಾಲಿನಿಂದ ಶೇಕಡ 75 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡುವಂತೆ ಆದೇಶ ಹೊರಡಿಸಿದ್ದು ಇದರಿಂದಾಗಿ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ,ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಕಾಲೇಜುಗಳ ಪ್ರವೇಶಾತಿ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಮುಂಗಡ ಶುಲ್ಕ ಕಟ್ಟದೆಯೇ ಪ್ರವೇಶ ಪಡೆಯಬಹುದು ಎಂದು ಆದೇಶ ಹೊರಡಿಸಿದ್ದರು ಎಷ್ಟು ಕಾಲೇಜುಗಳಲ್ಲಿ ಈ ಆದೇಶ ಜಾರಿಯಲ್ಲಿದೆ ಎಂದು ಪ್ರಶ್ನಿಸಿದರು.

ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ದಲಿತ ವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. ಪದಾಧಿಕಾರಿಗಳಾದ ನವೀನ್ ಕೋಳೂರು,ಗಿರೀಶ್ ಬೆಂಡರವಾಡಿ,ಮುತ್ತುರಾಜ್,ರೋಹಿತ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular