Thursday, April 3, 2025
Google search engine

Homeದೇಶಸೆ. 23ರಂದು ಒಂದು ರಾಷ್ಟ್ರ ಒಂದು ಚುನಾವಣೆ ಸಮಿತಿ ಸಭೆ

ಸೆ. 23ರಂದು ಒಂದು ರಾಷ್ಟ್ರ ಒಂದು ಚುನಾವಣೆ ಸಮಿತಿ ಸಭೆ

ಹೊಸದಿಲ್ಲಿ: ನೀತಿಯನ್ನು ಪರಿಶೀಲಿಸಲು ರಚಿಸಲಾದ ಒಂದು ರಾಷ್ಟ್ರ ಒಂದು ಚುನಾವಣೆ ಸಮಿತಿಯ ಮೊದಲ ಅಧಿಕೃತ ಸಭೆಯು ಸೆ. ೨೩ ರಂದು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್ ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸುಗಳನ್ನು ಮಾಡಲು ಎಂಟು ಸದಸ್ಯರ ಉನ್ನತ ಮಟ್ಟದ ಸಮಿತಿಗೆ ಸರಕಾರ ಈ ಹಿಂದೆ ಸೂಚಿಸಿತ್ತು. ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಝಾದ್ ಮತ್ತು ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್,ಕೆ, ಸಿಂಗ್ ಸದಸ್ಯರಾಗಿರುತ್ತಾರೆ.

ಸಮಿತಿಯು ತಕ್ಷಣವೇ ಕಾರ್ಯನಿರ್ವಹಿಸಲು ಆರಂಭಿಸಲಿದ್ದು, ಶೀಘ್ರವಾಗಿ ಶಿಫಾರಸುಗಳನ್ನು ಮಾಡಲಿದೆ, ಮಾಜಿ ಲೋಕಸಭೆಯ ಕಾರ್ಯದರ್ಶಿ ಸುಭಾಷ್ ಸಿ, ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಹಾಗೂ ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸಹ ಸದಸ್ಯರಾಗಿರುತ್ತಾರೆ.

RELATED ARTICLES
- Advertisment -
Google search engine

Most Popular