ಬೆಂಗಳೂರು: ೨೦೨೪ರ ದ್ವಿತೀಯ ಪಿಯುಸಿ ಪರೀಕ್ಷೆ -೩ ಫಲಿತಾಂಶ ಇಂದು ಮಂಗಳವಾರ ಮಧ್ಯಾಹ್ನ ೩ ಗಂಟೆಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದೆ.
ದಿನಾಂಕ ೨೪-೦೬-೨೦೨೪ – ೦೫-೦೭-೨೦೨೪ ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -೩ ರ ಫಲಿತಾಂಶವನ್ನು ಇಂದು ಮಧ್ಯಾಹ್ನ ೩.೦೦ ಗಂಟೆಗೆ https://karresults.nic.in ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯಮಂಡಳಿಯ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದಾರೆ.