ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತ್ಯೆಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆ ನಡೆದ ಸ್ಥಳದಿಂದ ಎಕೆ ೪೭ ರೈಫಲ್, ಎರಡು ಹ್ಯಾಂಡ್ ಗ್ರೆನೇಡ್, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಲೋಲಾಬ್ ಪ್ರದೇಶದಲ್ಲಿ ಮಂಗಳವಾರ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಬುಧವಾರ ಸಹ ಈ ಕಾರ್ಯಾಚರಣೆ ಮುಂದುವರೆದಿದೆ. ಓರ್ವ ಉಗ್ರನ ಹತ್ಯೆಯ ನಂತರ ಈ ಕಾರ್ಯಾಚರಣೆ ನಿಲ್ಲಿಸಲಾಗಿದೆ.
ಬಂಡಿಪೋರಾ ಜಿಲ್ಲೆಯ ಕೆತ್ಸುನ್ ಅರಣ್ಯದಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆಗೈಯ್ಯಲಾಗಿತ್ತು. ಆ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.