Friday, April 18, 2025
Google search engine

Homeರಾಜ್ಯವಿಧಾನಸಭೆಯಲ್ಲಿ ಭದ್ರತಾ ಲೋಪ…? ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅಪರಿಚಿತ ವ್ಯಕ್ತಿ

ವಿಧಾನಸಭೆಯಲ್ಲಿ ಭದ್ರತಾ ಲೋಪ…? ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅಪರಿಚಿತ ವ್ಯಕ್ತಿ

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ಅವರು  ವಿಧಾನಸಭೆಯಲ್ಲಿ ಇಂದು ಬಜೆಟ್ ಮಂಡನೆ ವೇಳೆ  ಭದ್ರತಾ ಲೋಪವಾಗಿರುವ ಆರೋಪ ಕೇಳಿ ಬಂದಿದೆ.

ಸಿಎಂ ಸಿದ್ಧರಾಮಯ್ಯ ಬಜೆಟ್ ಮಂಡಿಸುತ್ತಿದ್ದ ವೇಳೆ ಶಾಸಕರಲ್ಲದ ವ್ಯಕ್ತಿಯೋಬ್ಬ ವಿಧಾನಸಭೆ ಪ್ರವೇಶಿಸಿ ಶಾಸಕರ ಆಸನದಲ್ಲಿ ಕುಳಿತ ಘಟನೆ ನಡೆದಿದೆ. ಬಜೆಟ್​ ಮಂಡನೆ ವೇಳೆ ಸಮಾರು 15 ನಿಮಿಷಗಳ ಕಾಲ ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದಾನೆ. ಇದನ್ನು ಗಮನಿಸಿದ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಅವರಿಗೆ ವ್ಯಕ್ತಿ ಬಗ್ಗೆ ಅನುಮಾನ ಬಂದಿದೆ. ಕೂಡಲೇ ಅವರು ಎದ್ದು ಹೋಗಿ ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದಿದ್ದಾರೆ.

ಆದ್ರೆ, ಅಷ್ಟರೊಳಗೆ ಆ ಅನಾಮಿಕ ವ್ಯಕ್ತಿ ಅಲ್ಲಿಂದ ನಾಪತ್ತೆಯಾಗಿದ್ದು,  ಇದರಿಂದ ಆ ವ್ಯಕ್ತಿ ಯಾರು? ಏಕೆ ಬಂದಿದ್ದ? ಇಷ್ಟೊಂದು ಭದ್ರತೆ ನಡುವೆಯೂ ಆ ವ್ಯಕ್ತಿ ಹೇಗೆ ಸದನದೊಳಗೆ ಪ್ರವೇಶಿಸಿದ್ದನು ಎಂಬ ಪ್ರಶ್ನೆ ಉದ್ಬವಿಸಿದೆ.

RELATED ARTICLES
- Advertisment -
Google search engine

Most Popular