ಮೈಸೂರು: ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜಯಂತಿಯ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರ ಆವರಣದಲ್ಲಿ ಜ.23 ರಂದು ಬೆಳಗ್ಗೆ 11 ಗಂಟೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸ್ವಯಂ ಪ್ರೇರಿತ ರಕ್ತದಾನ ಮಾಡಬೇಕೆಂದು ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ ಎಸ್ ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್ ಆರ್ ಮಾದೇಸ್ವಾಮಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಮಂಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ನಾಗೇಶ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ,ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.