ಮೈಸೂರು: ಸೇವೆಯನ್ನು ಆತ್ಮತೃಪ್ತಿ ಮತ್ತು ಮನಃಸಂತೋಷಕ್ಕಾಗಿ ಮಾಡುತ್ತೇವೆ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ರವರು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದವರ ಸೇವೆಯ ಜೊತೆಗೆ ಬಡ ವಿದ್ಯಾರ್ಥಿ ಹಾಗೂ ರೋಗಿಗಳ ಸಹಾಯ ಮಾಡುವ ಮೂಲಕ ನಿಸ್ವಾರ್ಥ ದೃಷ್ಟಿಯಿಂದ ಸೇವೆ ಮಾಡುತ್ತಾ ನಿಜವಾದ ಸಮಾಜ ಸೇವೆ ಅವರದು ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಹೇಳಿದರು.
ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರ ಆವರಣದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಹಾಗೂ ಅರಿವು ಸಂಸ್ಥೆ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ 20 ವರ್ಷ ನಿರಂತರ ಸಾಮಾಜಿಕ ಸೇವೆ ಹಾಗೂ ಸಂಘಟನೆಯಿಂದ ಸೇವೆ ಸಲ್ಲಿಸುತ್ತಿರುವ ಎಸ್ ಇ ಗಿರೀಶ್ ರವರಿಗೆ ಜೀವರಕ್ಷಕ ಸೇವಾ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಅವರು ನಿಸ್ವಾರ್ಥ ಸೇವಾಕಾರಗಳು ಸಮಾಜದ ಸ್ವಾಸ್ಥ್ಯ ಕಾಪಾಡಲು ಸಹಕಾರಿ ಎಂದು ಇವರ 20 ವರ್ಷದ ಸದೀರ್ಘಕಾಲದ ಸೇವೆಯನ್ನು ಹೀಗೆ ಮುಂದುವರಿಸಲಿ ಎಂದು ಹೇಳಿದರು.
ನಂತರ ಮಾತನಾಡಿದ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಲಿಂಗರಾಜು ರಕ್ತದಾನಕ್ಕಿಂತ ಶ್ರೇಷ್ಠವಾದ ದಾನ ಮತ್ತೊಂದಿಲ್ಲ. ಅಪಘಾತ ಮತ್ತಿತರರ ಘಟನೆ ಸಂದರ್ಭದಲ್ಲಿ ರಕ್ತದ ಕೊರತೆಯಿಂದ ಪ್ರಾಣ ಕಳೆದುಕೊಳ್ಳುವ ಸ್ಥಿತಿಯಲ್ಲಿರುವ ರೋಗಿಗಳಿಗೆ ರಕ್ತದಾನ ಮಾಡುವವರೇ ಎರಡನೇ ದೇವರಾಗುತ್ತಾರೆ ಅಂತಹ ಕೆಲಸದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರ 20 ವರ್ಷದಿಂದ ನಿರಂತರವಾಗಿ ನಡೆಸುತ್ತಾ ಬಂದಿದ್ದಾರೆ. ಸರ್ಕಾರದಿಂದ ಜೀವದಾರ ರಕ್ತ ನಿಧಿ ಕೇಂದ್ರಕ್ಕೆ ಮೈಸೂರು ನಗರದ ಅತ್ಯುತ್ತಮ ರಕ್ತ ನಿಧಿ ಕೇಂದ್ರ ಎಂಬ ಪ್ರಶಂಸೆಗೆ ಪಾತ್ರವಾಗಿದೆ
ಎಂಬುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.
ಈ ಸಂದರ್ಭದಲ್ಲಿ 30 ಯೂನಿಟ್ ಸ್ವಯಂ ಪ್ರೇರಿತ ರಕ್ತದಾನವನ್ನು ಶ್ರೀ ದುರ್ಗಾ ಫೌಂಡೇಶನ್ ಹಾಗೂ ಅರಿವು ಸಂಸ್ಥೆಯ ಪದಾಧಿಕಾರಿಗಳು ಮಾಡಿದರು.
ಇದೇ ಸಂದರ್ಭದಲ್ಲಿ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಲಿಂಗರಾಜು, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ರೇಣುಕಾ ರಾಜ್, ಜೆಡಿಎಸ್ ಕಾರ್ಯದಕ್ಷ ಎಸ್ ಪ್ರಕಾಶ್ ಪ್ರಿಯಾ ದರ್ಶನ್, ಜಿ ರಾಘವೇಂದ್ರ, ಆನಂದ್, ಮುತ್ತಣ್ಣ,ಎಂ.ಗಂಟಯ್ಯ (ಕೃಷ್ಣಪ್ಪ), ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ಕೇಬಲ್ ವಿಜಿ, ಸೂರಜ್, ಸದಾಶಿವ್, ವಿನಯ್ ಕಣಗಾಲ್, ರಾಕೇಶ್, ಕೆಂಪಣ್ಣ ,ನಂದೀಶ್, ರಾಘವೇಂದ್ರ, ಹಾಗೂ ಇನ್ನಿತರರು ಹಾಜರಿದ್ದರು.