ಮಂಗಳೂರು (ದಕ್ಷಿಣ ಕನ್ನಡ): ಅಕ್ರಮವಾಗಿ ಮಾದಕ ವಸ್ತು MDMA ನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿಯ ಅತಿಥಿ ಬಾರ್ ಬಳಿ ನಡೆದಿದೆ.
ಆರೋಪಿಯನ್ನು ಕಿರಣ್ ಡಿಸೋಜ (25 ವರ್ಷ), ಎಂದು ಗುರುತಿಸಲಾಗಿದೆ. ಈತನನ್ನು ವಶಕ್ಕೆ ಪಡೆದು ಆತನಿಂದ ನಿಷೇದಿತ ಮಾದಕ ವಸ್ತು ಸುಮಾರು 10 ಗ್ರಾಂ ತೂಕದ MDMA (ಅಂದಾಜು ಮೌಲ್ಯ 30,000/-) ಮಾದಕ ವಸ್ತುವನ್ನು, ಸ್ಕೂಟರ್ ಮತ್ತು ಮೊಬೈಲ್ ಫೋನ್‌ನ್ನು ಹಾಗೂ ಇದರ ಒಟ್ಟು ಮೌಲ್ಯ 65,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.