ಮಂಗಳೂರು (ದಕ್ಷಿಣ ಕನ್ನಡ): ಕೊಡಗಿನ ಪೊನ್ನಂಪೇಟೆಯಲ್ಲಿ ಮೊನ್ನೆ ನಡೆದ ಐದು ಜಿಲ್ಲೆಗಳ ಕ್ರೀಡಾಕೂಟದಲ್ಲಿ ಮಂಗಳೂರು ಹಿರಿಯ ಅಥ್ಲೀಟ್ ಜೆ.ಆನಂದ ಸೋನ್ಸ್ ಇವರು ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೇ 100 ಮೀ.ಡಿಸ್ಕಸ್ ಥ್ರೋನಲ್ಲಿ ಎರಡು ಬೆಳ್ಳಿ ಪದಕ ಗೆದ್ದಿದ್ದಾರೆ.
ಇನ್ನು ಕಳೆದ ವಾರ ಹೈದ್ರಾಬಾದ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋನಲ್ಲಿ ಕಂಚು ಪದಕ, 100 ಮೀ.ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. (12 Second) . ಇವರನ್ನು ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲಾ ಪ್ರಶಸ್ತಿ ಪತ್ರ ನೀಡಿ ಗೌರವಿಸಿತ್ತು. ಅಂದಹಾಗೆ ಇವರಿಗೆ ಸದ್ಯ 85 ವರ್ಷ .