Friday, April 11, 2025
Google search engine

HomeUncategorizedರಾಷ್ಟ್ರೀಯಕಾಂಗ್ರೆಸ್​ನ ಹಿರಿಯ ಸಂಸದ ವಸಂತ್ ​ರಾವ್ ಚವಾಣ್ ನಿಧನ

ಕಾಂಗ್ರೆಸ್​ನ ಹಿರಿಯ ಸಂಸದ ವಸಂತ್ ​ರಾವ್ ಚವಾಣ್ ನಿಧನ

ಮುಂಬೈ: ಕಾಂಗ್ರೆಸ್​ನ ಹಿರಿಯ ಸಂಸದ ವಸಂತ್ ​ರಾವ್ ಚವಾಣ್ ನಿಧನರಾಗಿದ್ದಾರೆ. ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆರಂಭದಲ್ಲಿ ಚವಾಣ್ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು. ಲೋ ಬಿಪಿ ಕೂಡ ಇತ್ತು. ಚವಾಣ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಹೈದರಾಬಾದ್‌ ಗೆ ಕರೆದೊಯ್ಯಲಾಯಿತು.

ಅವರು ಪ್ರತಿ ತಿಂಗಳು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು, ನಾಂದೇಡ್‌ನಲ್ಲಿ ನಡೆದ ಕಾಂಗ್ರೆಸ್‌ ವಿಭಾಗೀಯ ಸಭೆಯಿಂದಾಗಿ ನಿತ್ಯ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದರಿಂದ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಅಶೋಕ್ ಚವಾಣ್ ಬಿಜೆಪಿ ಸೇರಿದ್ದರು. ಈ ಹಿನ್ನೆಲೆಯಲ್ಲಿ ನಾಂದೇಡ್ ಚುನಾವಣೆ ಕುರಿತು ಚರ್ಚೆ ನಡೆಸಲಾಯಿತು. ಕಾಂಗ್ರೆಸ್ ಭದ್ರಕೋಟೆಯಾಗಿರುವ ನಾಂದೇಡ್ ಕ್ಷೇತ್ರದಲ್ಲಿ 2004ರ ಚುನಾವಣೆಗೆ ಬಿಜೆಪಿ ಪ್ರವೇಶಿಸಿತ್ತು.

ಆದರೆ ಕಾಂಗ್ರೆಸ್ ಅಭ್ಯರ್ಥಿ ವಸಂತ್ ಚವಾಣ್ ಬಿಜೆಪಿಯ ಅಂದಿನ ಸಂಸದ ಪ್ರತಾಪ್ ಪಾಟೀಲ್ ಚಿಖ್ಲಿಕರ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದರು. ಚವಾಣ್ ಅವರು ಚಿಖ್ಲಿಕರ್ ಅವರನ್ನು 59 ಸಾವಿರದ 442 ಮತಗಳಿಂದ ಸೋಲಿಸಿದರು. ವಸಂತರಾವ್ ಚವಾಣ್ 5,28,894 ಹಾಗೂ ಚಿಖ್ಲಿಕರ್ 4,69,452 ಮತಗಳನ್ನು ಪಡೆದಿದ್ದರು.

ವಸಂತ್ ಚವಾಣ್ ಅವರು ಪ್ರಾಮಾಣಿಕ ಮತ್ತು ನಿಷ್ಠಾವಂತ ಕಾಂಗ್ರೆಸ್ ನಾಯಕ ಎಂದು ಹೆಸರಾಗಿದ್ದರು. ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ನಾಂದೇಡ್ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದರು.

RELATED ARTICLES
- Advertisment -
Google search engine

Most Popular