ಬೆಂಗಳೂರು: ನಿವೃತ್ತಿಗೆ ಮೂರು ತಿಂಗಳು ಬಾಕಿ ಇರುವಾಗಲೇ ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ. ಹೆಚ್. ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರ ಮೇ ನಲ್ಲಿ ನಿವೃತ್ತಿಯಾಗಲಿದ್ದಾರೆ. ಆದರೆ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಏಪ್ರಿಲ್ ೩೦ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದು ರಾಜ್ಯ ಪೊಲೀಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.